ಬೆಂಗಳೂರು: “ಚುನಾವಣಾ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪ್ರವಾಸಗಳ ಕುರಿತು ಚರ್ಚೆ ಮಾಡಿದ್ದೇವೆ” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಅವರು ಪಕ್ಷದ ಕಚೇರಿಯಲ್ಲಿ ನಡೆದ ಚುನಾವಣಾ ನಿರ್ವಹಣಾ ಸಮಿತಿ ಸಭೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು.
“ರಾಷ್ಟ್ರೀಯ ನಾಯಕರ ಚುನಾವಣಾ ಪ್ರವಾಸಗಳ ಕುರಿತು ಸಭೆ ನಡೆಸಿದ್ದೇವೆ. ಮುಂದಿನ 20 ದಿನಗಳ ರೂಪುರೇಷೆ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದರು.
ಎಲ್ಲ ಅಭ್ಯರ್ಥಿಗಳ ಜೊತೆ ಸಂಪರ್ಕ ಇಟ್ಟುಕೊಂಡಿದ್ದೇವೆ. ಅಭ್ಯರ್ಥಿಗಳ 3ನೇ ಪಟ್ಟಿ ಶೀಘ್ರ ಬಿಡುಗಡೆ ಆಗುತ್ತದೆ ಎಂದರು.
ಶನಿವಾರ ಮಾಜಿ ಸಿಎಂ ಜಗದೀಶ್ ಶೆಟ್ಟರ್ ನಿವಾಸದಲ್ಲಿ ಸಭೆ ನಡೆಯುವ ವಿಚಾರದ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಜಗದೀಶ್ ಶೆಟ್ಟರ್ ಸಭೆ ಎಲ್ಲವೂ ಗೊತ್ತಿದೆ” ಎಂದರಲ್ಲದೇ “ನನ್ನ ಹೆಣ ಕೂಡಾ ಬಿಜೆಪಿ ಕಚೇರಿ ಕಡೆ ಹೋಗಲ್ಲ” ಎಂಬ ಲಕ್ಷ್ಮಣ ಸವದಿ ಹೇಳಿಕೆ ವಿಚಾರದ ಕುರಿತು ಕೇಳಿದ ಪ್ರಶ್ನೆಗೆ “ಸವದಿ ಸ್ವಲ್ಪ ಭಾವುಕರಾಗಿದ್ದಾರೆ” ಎಂದು ಹೇಳಿದರು.
Laxmi News 24×7