Breaking News

ರಾಜಶೇಖರ ಕಾರದಗಿ ಅವರನ್ನು ಬಿಜೆಪಿಯಿಂದ ಉಚ್ಛಾಟಿಸಲಾಗಿದೆ

Spread the love

ಬೆಳಗಾವಿ: ಸವದತ್ತಿ ಪುರಸಭೆಯ ಅಧ್ಯಕ್ಷ ರಾಜಶೇಖರ ಕಾರದಗಿ ಅವರನ್ನು ಬಿಜೆಪಿಯಿಂದ ಉಚ್ಛಾಟಿಸಲಾಗಿದೆ.

ಬಿಜೆಪಿ ಗ್ರಾಮೀಣ ಅಧ್ಯಕ್ಷ ಸಂಜ ಪಾಟೀಲ ಈ ಕುರಿತು ಪ್ರಕಟಣೆ ನೀಡಿದ್ದಾರೆ.

ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಾಂತರ ಜಿಲ್ಲೆಯಲ್ಲಿ ಬರುವ ಸವದತ್ತಿ ಪುರಸಭೆಯ ಅಧ್ಯಕ್ಷ ರಾಜಶೇಖರ ಕಾರದಗಿ ಇವರು ಪಕ್ಷದಿಂದ ಆಯೋಜಿಸಿದ ಸಭೆಗಳಿಗೆ ಆವ್ಹಾನ ನೀಡಿದರೂ ಸಭೆಗಳಿಗೆ ಗೈರಾಗಿದ್ದು ಕಂಡುಬಂದಿದೆ.

ಸುಮಾರು ೨ ತಿಂಗಳ ಕಾಲದಿಂದ ಕಾಂಗ್ರೆಸ್ ಪಕ್ಷದಲ್ಲಿ ಅವರು ಕಾರ್ಯಚಟುವಟಿಕೆಗಳಲ್ಲಿ ಭಾಗವಹಿಸಿತ್ತದ್ದರು ಎಂದು ಮಂಡಲ ಅಧ್ಯಕ್ಷರು ಸಾಕ್ಷಿಸಮೇತ ನನಗೆ ವರದಿ ನೀಡಿರುತ್ತಾರೆ.

ಆ ವರದಿ ಆದರಿಸಿ ಅವರನ್ನು ಭಾರತೀಯ ಜನತಾ ಪಾರ್ಟಿ ಪ್ರಾಥಮಿಕ ಸದಸ್ಯತ್ವದಿಂದ ಹಾಗೂ ಇನ್ನಿತರ ಎಲ್ಲಾ ಜವಾಬ್ದಾರಿಗಳಿಂದ ಈ ಕ್ಷಣದಿಂದ ಅವರನ್ನು ಪಕ್ಷದಿಂದ ಉಚ್ಚಾಟಿಸಿ ಪಕ್ಷದಿಂದ ಬಿಡುಗಡೆಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.


Spread the love

About Laxminews 24x7

Check Also

ಮೃತ ಸರ್ಕಾರಿ ವೈದ್ಯಾಧಿಕಾರಿ ಕೊಠಡಿಯಲ್ಲಿ ಮಾಟಮಂತ್ರ: ಸಾವಿನ ಸುತ್ತ ಅನುಮಾನದ ಹುತ್ತ

Spread the loveಕೋಲಾರ, ಜುಲೈ 07: ಜಿಲ್ಲೆ ಮಾಲೂರು ತಾಲ್ಲೂಕಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ಅವರು ತಮ್ಮ ಉತ್ತಮ ಸೇವೆಯಿಂದಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ