Breaking News

ಹಿರಿಯ ನಾಯಕರನ್ನು ಕಡೆಗಣಿಸಿದ ಬಿಜೆಪಿ , ಶೆಟ್ಟರ್ ಕಾಂಗ್ರೆಸ್‌ಗೆ ಬಂದರೆ ಸ್ವಾಗತ : ಸಿದ್ದರಾಮಯ್ಯ

Spread the love

ಬೆಳಗಾವಿ: ‘ಹಿರಿಯ ನಾಯಕರನ್ನು ಬಿಜೆಪಿ ಸರಿಯಾಗಿ ನಡೆಸಿಕೊಂಡಿಲ್ಲ. ಸದಾ ಪಕ್ಷದ ಸಿದ್ಧಾಂತ ಎನ್ನುತ್ತಿದ್ದ ಕೆ.ಎಸ್‌.ಈಶ್ವರಪ್ಪ, ಈಗ ಎಲ್ಲಿ ಹೋದರು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು.

ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜಗದೀಶ ಶೆಟ್ಟರ್ ನನ್ನೊಂದಿಗೆ ಮಾತನಾಡಿಲ್ಲ. ನಮ್ಮ ಪಕ್ಷಕ್ಕೆ ಬರುವುದಾದರೆ ಅವರಿಗೆ ಸ್ವಾಗತಿಸುತ್ತೇನೆ. ಲಕ್ಷ್ಮಣ ಸವದಿ ಆಗಮನದಿಂದ ಕಾಂಗ್ರೆಸ್‌ಗೆ ಲಾಭವಾಗಲಿದೆ. ಸವದಿ ಅವರು ಕೇಳಿದ ಕಡೆ ಪ್ರಚಾರ ಮಾಡಲು ಜವಾಬ್ದಾರಿ ಕೊಡುತ್ತೇವೆ’ ಎಂದರು.ರ

ವರುಣಾ ಕ್ಷೇತ್ರದಲ್ಲಿ ವಿ.ಸೋಮಣ್ಣ ಸ್ಪರ್ಧಿಸುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ‘ವರುಣಾ ಕ್ಷೇತ್ರದಲ್ಲಿ ಅವನ ಪರವಾಗಿ ಒಂದು ಮತವೂ ಇಲ್ಲ. ಅವನು ಹೊರಗಿನವನು’ ಎಂದರು.

ಸಿದ್ದರಾಮಯ್ಯ-ಸವದಿ ಮಾತುಕತೆ: ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸಿದ್ದರಾಮಯ್ಯ ಹಾಗೂ ಲಕ್ಷ್ಮಣ ಸವದಿ ಮುಖಾಮುಖಿಯಾದರು. ಪರಸ್ಪರ ಕೆಲಹೊತ್ತು ಮಾತುಕತೆ ನಡೆಸಿದರು.

ಸಿದ್ದರಾಮಯ್ಯ ಇಲ್ಲಿಂದ ಹೆಲಿಕಾಪ್ಟರ್ ಮೂಲಕ ಹಳಿಯಾಳಕ್ಕೆ ತೆರಳುತ್ತಿದ್ದರು. ಕಾಂಗ್ರೆಸ್ ಸೇರ್ಪಡೆಯಾದ ಬಳಿಕ ಸವದಿ ಬೆಂಗಳೂರಿನಿಂದ ‌ಬೆಳಗಾವಿಗೆ ಆಗಮಿಸಿದರು. ಈ ವೇಳೆ ‌ಉಭಯ ನಾಯಕರು ಚರ್ಚಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ‌ಜಾರಕಿಹೊಳಿ ಸಾಥ್ ನೀಡಿದರು.

ಟಿಕೆಟ್ ನಿರಾಕರಣೆಗೆ ಮುನಿಸಿಕೊಂಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್‌ಗೆ ಬಂದರೆ ಸ್ವಾಗತಿಸುತ್ತೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬೆಳಗಾವಿಯಲ್ಲಿ ಶನಿವಾರ ಹೇಳಿದ್ದಾರೆ.

ಬಿಜೆಪಿ ಪಕ್ಷ ಹಿರಿಯ ನಾಯಕರನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ.

 

‘ಹಿರಿಯ ನಾಯಕರನ್ನು ಬಿಜೆಪಿ ಸರಿಯಾಗಿ ನಡೆಸಿಕೊಂಡಿಲ್ಲ. ಸದಾ ಪಕ್ಷದ ಸಿದ್ಧಾಂತ ಎನ್ನುತ್ತಿದ್ದ ಕೆ.ಎಸ್‌.ಈಶ್ವರಪ್ಪ, ಈಗ ಎಲ್ಲಿ ಹೋದರು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು.

ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜಗದೀಶ ಶೆಟ್ಟರ್ ನನ್ನೊಂದಿಗೆ ಮಾತನಾಡಿಲ್ಲ. ನಮ್ಮ ಪಕ್ಷಕ್ಕೆ ಬರುವುದಾದರೆ ಅವರಿಗೆ ಸ್ವಾಗತಿಸುತ್ತೇನೆ. ಲಕ್ಷ್ಮಣ ಸವದಿ ಆಗಮನದಿಂದ ಕಾಂಗ್ರೆಸ್‌ಗೆ ಲಾಭವಾಗಲಿದೆ. ಸವದಿ ಅವರು ಕೇಳಿದ ಕಡೆ ಪ್ರಚಾರ ಮಾಡಲು ಜವಾಬ್ದಾರಿ ಕೊಡುತ್ತೇವೆ’ ಎಂದರು.

ವರುಣಾ ಕ್ಷೇತ್ರದಲ್ಲಿ ವಿ.ಸೋಮಣ್ಣ ಸ್ಪರ್ಧಿಸುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ‘ವರುಣಾ ಕ್ಷೇತ್ರದಲ್ಲಿ ಅವನ ಪರವಾಗಿ ಒಂದು ಮತವೂ ಇಲ್ಲ. ಅವನು ಹೊರಗಿನವನು’ ಎಂದರು


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ