Breaking News

ಪಕ್ಷ ಬೇರೆ, ವೈಯಕ್ತಿಕ ಸಂಬಂಧ ಬೇರೆ: ಜಗದೀಶ ಶೆಟ್ಟರ್ ಸಹೋದರ ಪ್ರದೀ‍ಪ

Spread the love

ಹುಬ್ಬಳ್ಳಿ: ‘ಪಕ್ಷಕ್ಕೆ ಸಂಬಂಧಿಸಿದ ನಿಲುವು ಬೇರೆ, ವೈಯಕ್ತಿಕ ಸಂಬಂಧ ಬೇರೆ…’ – ಬಿಜೆಪಿಯ ಹಿರಿಯ ನಾಯಕ ಜಗದೀಶ ಶೆಟ್ಟರ್ ಅವರು ಪಕ್ಷ ತೊರೆಯುವುದರ ಕುರಿತು, ಅವರ ಸಹೋದರ ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್ ಅವರ ಅಭಿಪ್ರಾಯವಿದು.

 

ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಅಣ್ಣನ ಮನೆಗೆ ನಾನು ದಿನಾ ಹೋಗುತ್ತೇನೆ. ಊಟ ಮಾಡುತ್ತೇನೆ. ವೈಯಕ್ತಿಕ ಸಂಬಂಧ ಬೇರೆ, ಪಕ್ಷ ಬೇರೆ. ಇಷ್ಟಕ್ಕೂ ಅವರಿನ್ನೂ ಬಿಜೆಪಿಯಲ್ಲೇ ಇದ್ದಾರೆ. ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟಿಲ್ಲ. ನಾನಂತೂ ಪಕ್ಷದಲ್ಲೇ ಇರುವೆ’ ಎಂದ ಸ್ಪಷ್ಟಪಡಿಸಿದರು.

‘ಅಣ್ಣನಿಗೆ ಕಾಂಗ್ರೆಸ್‌ನಿಂದ ಆಹ್ವಾನ ಬಂದಿದೆ. ಅಲ್ಲಿಗೆ ಹೋಗಬೇಕೇ ಬೇಡವೇ ಅಥವಾ ಪಕ್ಷೇತರವಾಗಿ ಸ್ಪರ್ಧಿಸಬೇಕೇ ಎಂಬುದು ಅವರಿಗೆ​​ ಬಿಟ್ಟ ನಿರ್ಧಾರ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.


Spread the love

About Laxminews 24x7

Check Also

ಖಮೇನಿ ಹತ್ಯೆ ಪ್ರತಿಭಟನೆಗಳ ಬಗ್ಗೆ ಪೋಸ್ಟ್‌ – ಕಾಶ್ಮೀರ ಸಂಸದರ ವಿರುದ್ಧ ಎಫ್‌ಐಆರ್‌

Spread the loveಶ್ರೀನಗರ: ಇರಾನ್‌ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ  ಹತ್ಯೆ ಪ್ರತಿಭಟನೆಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ