Breaking News

ಪ್ರಚಾರಕ್ಕೆ ತೆರಳಿದ್ದ ವಿ.ಸೋಮಣ್ಣ, ಪ್ರತಾಪ ಸಿಂಹಗೆ ತೀವ್ರ ತರಾಟೆ

Spread the love

ಮೈಸೂರು; ಪ್ರಚಾರಕ್ಕೆ ತೆರಳಿದ್ದ ಸಚಿವ ವಿ.ಸೋಮಣ್ಣ ಹಾಗೂ ಸಂಸದ ಪ್ರತಾಪ ಸಿಂಹಗೆ ಜನರು ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ವರುಣಾ ಕ್ಷೇತ್ರದಲ್ಲಿ ನಡೆದಿದೆ. ವಿ.ಸೋಮಣ್ಣ ಅವರು ನಿನ್ನೆ ನಾಮಪತ್ರ ಸಲ್ಲಿಸಿದ್ದು, ಇಂದು ವರುಣಾ ಕ್ಷೇತ್ರ ವ್ಯಾಪ್ತಿಯ ಲಲಿತಾದ್ರಿಪುರಂನಲ್ಲಿ ಮತಯಾಚನೆಗೆ ತೆರಳಿದ್ದರು.

ಈ ವೇಳೆ ಲಲಿತಾದ್ರಿಪುರಂ ಗ್ರಾಮಸ್ಥರು, ನೀವು ಮೈಸೂರು ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿದ್ದಾಗ ಯಾವ ಅಭಿವೃದ್ಧಿ ಮಾಡಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾರೆ. ಸೋಮಣ್ಣ ಹಾಗೂ ಪ್ರತಾಪ ಸಿಂಹ ಇಬ್ಬರನ್ನೂ ತರಾಟೆಗೆ ತೆಗೆದುಕೊಂಡಿದ್ದಾರೆ.

ನೀವು ಉಸ್ತುವಾರಿ ಸಚಿವರಾಗಿದ್ದಿರಿ, ಆಗ ನಿಮ್ಮ ಕೊಡುಗೆ ಏನು ಎಂದು ಪ್ರಶ್ನೆ ಮಾಡಿರುವ ಸಾರ್ವಜನಿಕರು, ಈಗ ಯಾಕೆ ಬಂದಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಇದನ್ನು ವ್ಯಕ್ತಿಯೊಬ್ಬ ವಿಡಿಯೋ ಮಾಡಿದ್ದು, ಅದನ್ನು ನೋಡಿದ ಸಂಸದ ಪ್ರತಾಪ ಸಿಂಹ ಮೊಬೈಲ್‌ ಕಿತ್ತುಕೊಳ್ಳಲು ಪ್ರಯತ್ನಿಸಿದ ಘಟನೆಯೂ ನಡೆದಿದೆ. ಇನ್ನು ಗ್ರಾಮಸ್ಥರು ಕೇಳದ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಸಚಿವ ಸೋಮಣ್ಣ ಹಾಗೂ ಸಂಸದ ಪ್ರತಾಪ ಸಿಂಹ ತಬ್ಬಿಬ್ಬಾಗಿದ್ದಾರೆ.


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ