Breaking News

ರಾಜ್ಯದ 20 ಕಡೆ ಮೋದಿ ರ‍್ಯಾಲಿ: ಸಿಎಂ ಬೊಮ್ಮಾಯಿ

Spread the love

ಲಬುರಗಿ: ರಾಜ್ಯದ 20 ಕಡೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಚುನಾವಣಾ ರ‍್ಯಾಲಿ ಹಾಗೂ ಪ್ರಚಾರ ಸಭೆಗಳನ್ನು ಆಯೋಜಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಅಫಜಲಪುರದಲ್ಲಿ ಬಿಜೆಪಿ ಅಭ್ಯರ್ಥಿ ಮಾಲೀಕಯ್ಯ ಗುತ್ತೇದಾರ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದ ಎಲ್ಲ ವಿಭಾಗಗಳಲ್ಲಿ ಜತೆಗೆ ಪ್ರಮುಖ ಕ್ಷೇತ್ರಗಳಲ್ಲಿ ಮೋದಿ ಅವರು ಚುನಾವಣ ಬಹಿರಂಗ ಸಭೆ ಉದ್ದೇಶಿಸಿ ಮಾತನಾಡುವರು ಜತೆಗೆ ರ‍್ಯಾಲಿ ನಡೆಸುವರು.ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ರಾಯಚೂರಲ್ಲಿ ಮೋದಿ ಅವರ ಕಾರ್ಯಕ್ರಮ ಆಯೋಜಿಸಲಾಗುವುದು.

ಇದೇ ಎ 24 ರಿಂದಲೇ ಮೋದಿ ಅವರ ಚುನಾವಣ ಪ್ರಚಾರ ಸಭೆ ಆರಂಭವಾಗಲಿದೆ ಎಂದು ವಿವರಣೆ ನೀಡಿದರು.

ಆಂತರಿಕ ಭಯದ ಹಿನ್ನೆಲೆಯಲ್ಲಿ ಕನಕಪುರದಲ್ಲಿ ಸಂಸದ ಡಿ.ಕೆ.‌ಸುರೇಶ ನಾಮಪತ್ರ ಹಾಕಿದ್ದಾರೆ. ಯಾವ ಭಯದ ಹಿನ್ನೆಲೆಯಲ್ಲಿ ನಾಮಪತ್ರ ಹಾಕಿದ್ದಾರೆ ಎಂಬುದು ಅವರಿಗೇ ಗೊತ್ತು.‌ ನಾಮಪತ್ರ ಸ್ವೀಕರಿಸುವುದು- ತಿರಸ್ಕರಿಸುವುದು ಚುನಾವಣಾ ಆಯೋಗ. ಸಿದ್ದರಾಮಯ್ಯ ಅವರಿಗೆ ಕಾಡದ ಭಯ ಡಿ.ಕೆ. ಶಿವಕುಮಾರ ಅವರಿಗೇಕೆ? ಎಂದು ಸಿಎಂ ಬೊಮ್ಮಾಯಿ ಖಾರವಾಗಿ ಪ್ರಶ್ನಿಸಿದರು.

70 ಸ್ಥಾನಗಳನ್ನು ಲಿಂಗಾಯತರಿಗೆ ನೀಡಲಾಗಿದೆ. ಬಿಜೆಪಿ ಯಾವಾಗಲೂ ಲಿಂಗಾಯತರಿಗೆ ಪ್ರಾತಿನಿಧ್ಯ ನೀಡುತ್ತಾ ಬಂದಿದೆ. ಕಳೆದ ಸಲ ಧರ್ಮ ಒಡೆದ ಕಾಂಗ್ರೆಸ್ ಲಿಂಗಾಯರನ್ನು ಛಿದ್ರ ಮಾಡಲು ಹುನ್ನಾರ ನಡೆಸಿದೆ ಎಂದು ವಾಗ್ದಾಳಿ ನಡೆಸಿದರು.


Spread the love

About Laxminews 24x7

Check Also

ಬೆಂಗಳೂರಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆದ ಕನ್ನಡ ಜಾಗೃತಿ ಸಮಿತಿ ಸದಸ್ಯರ ರಾಜ್ಯಮಟ್ಟದ ಕಮ್ಮಟದಲ್ಲಿ ಪಾಲ್ಗೊಂಡ ಕ್ಷಣಗಳು.

Spread the love ಬೆಂಗಳೂರಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆದ ಕನ್ನಡ ಜಾಗೃತಿ ಸಮಿತಿ ಸದಸ್ಯರ ರಾಜ್ಯಮಟ್ಟದ ಕಮ್ಮಟದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ