Breaking News

ರಾಜ್ಯಾದ್ಯಂತ ಇಂದು ಬೆಳಗ್ಗೆ 11 ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

Spread the love

ಬೆಂಗಳೂರು: ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆ ( PUC Exam 2023 ) ಮುಕ್ತಾಯಗೊಂಡಿದ್ದು, ಇದೀಗ ಉತ್ತರ ಪತ್ರಿಕೆ ಮೌಲ್ಯಮಾಪನ ಕೂಡ ಮುಕ್ತಾಯಗೊಂಡಿದೆ. ಹೀಗಾಗಿ ಏಪ್ರಿಲ್ 21ರ ಇಂದು ಬೆಳಗ್ಗೆ 11 ಗಂಟೆಗ ದ್ವಿತೀಯ ಪಿಯುಸಿ ಫಲಿತಾಂಶ ( Karnataka Second PUC Exam Results ) ಪ್ರಕಟಗೊಳ್ಳಲಿದೆ.

 

ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದು, ಮಾರ್ಚ್ 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ದಿನಾಂಕ 09-03-2023ರಿಂದ 29-03-2023ರವರೆಗೆ ನಡೆಸಲಾಗಿತ್ತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ ಎಂದು ತಿಳಿಸಿದ್ದಾರೆ.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ( 2nd PUC Annual Exam Result ) ಪ್ರಕಟಿಸುವ ಸಂಬಂಧ ದಿನಾಂಕ 21-04-2023ರಂದು ಬೆಳಿಗ್ಗೆ 10ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ. ಫಲಿತಾಂಶ ಪ್ರಕಟಿಸಲಾಗುವುದು, ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ 21-04-2023ರಂದು ಬೆಳಿಗ್ಗೆ 11 ಗಂಟೆಯ ನಂತ್ರ ವೀಕ್ಷಿಸಬಹುದು ಎಂದು ತಿಳಿಸಿದ್ದಾರೆ.

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ -2023 ಪರಿಶೀಲಿಸುವುದು ಹೇಗೆ?

karresults.nic.in ನ ಅಧಿಕೃತ ಸ್ಥಳಕ್ಕೆ ಭೇಟಿ ನೀಡಿ.

ಫಲಿತಾಂಶದ ಲಿಂಕ್ ಅನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ.

ಫಲಿತಾಂಶದ ಲಿಂಕ್ ಅನ್ನು ಪರಿಶೀಲಿಸಿ ಮತ್ತು ಲಾಗಿನ್ ವಿವರಗಳನ್ನು ನಮೂದಿಸಿ.

ಒಮ್ಮೆ ಮಾಡಿದ ನಂತರ, ಸಬ್ಮಿಟ್ ಮೇಲೆ .

ನಿಮ್ಮ ಫಲಿತಾಂಶವು ಪರದೆಯ ಮೇಲೆ ಪ್ರದರ್ಶಿತವಾಗುತ್ತದೆ.

ಫಲಿತಾಂಶವನ್ನು ಪರಿಶೀಲಿಸಿ ಮತ್ತು ಪುಟವನ್ನು ಡೌನ್ ಲೋಡ್ ಮಾಡಿ.

ಹೆಚ್ಚಿನ ಅಗತ್ಯಕ್ಕಾಗಿ ಅದರ ಹಾರ್ಡ್ ಕಾಪಿಯನ್ನು ಇರಿಸಿಕೊಳ್ಳಿ.

 


Spread the love

About Laxminews 24x7

Check Also

ಗಣೇಶೋತ್ಸವದ ಹಿನ್ನಲ್ಲೆಯಲ್ಲಿ ಬೆಳಗಾವಿಯಲ್ಲಿ ಭಾರಿ ವಾಗನಗಳ ಮಾರ್ಗ ಬದಲಾವಣೆ ಮಾಡಿದ ನಗರ ಪೊಲೀಸರು….

Spread the love ಗಣೇಶೋತ್ಸವದ ಹಿನ್ನಲ್ಲೆಯಲ್ಲಿ ಬೆಳಗಾವಿಯಲ್ಲಿ ಭಾರಿ ವಾಗನಗಳ ಮಾರ್ಗ ಬದಲಾವಣೆ ಮಾಡಿದ ನಗರ ಪೊಲೀಸರು…. ಅದ್ದೂರಿ ಗಣೇಶೋತ್ಸವಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ