Breaking News

BJP ಸರಕಾರದಲ್ಲಿ ಭ್ರಷ್ಟಾಚಾರ ಇದ್ದದ್ದು ನಿಜ: ಶೆಟ್ಟರ್‌

Spread the love

ಹುಬ್ಬಳ್ಳಿ: ಬಿಜೆಪಿ ಸರಕಾರದಲ್ಲಿ ಶೇ.40 ಪರ್ಸಂಟೇಜ್‌ ಕಮಿಷನ್‌ ಇತ್ತೋ ಇಲ್ಲವೋ ಗೊತ್ತಿಲ್ಲ. ಆದರೆ ಭ್ರಷ್ಟಾಚಾರ ಇದ್ದದ್ದು ನಿಜ. ಆರೋಗ್ಯ ಇಲಾಖೆ ಕಾರ್ಯ ವೈಖರಿ ಕುರಿತು ಸದನದಲ್ಲಿ ಮಾತನಾಡುವಾಗ ಪ್ರಸ್ತಾವಿಸಿದ್ದೆ ಎಂದು ಜಗದೀಶ ಶೆಟ್ಟರ್‌ ತಿಳಿಸಿದರು.

 

ಮಾಧ್ಯಮ ಸಂವಹನ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇಲ್ಲಿನ ಕಿಮ್ಸ್‌ನಲ್ಲಿ 30 ವೈದ್ಯರು ಹಾಗೂ ಹಾವೇರಿ ವೈದ್ಯಕೀಯ ಕಾಲೇಜಿಗೆ 70 ವೈದ್ಯರ ನೇಮಕಾತಿಗೆ ಸಂದರ್ಶನ ಮುಗಿದು ಒಂದು ವರ್ಷವಾದರೂ ನೇಮ ಕಾತಿ ಆದೇಶ ನೀಡಿರಲಿಲ್ಲ. ಈ ಕುರಿತು ಸದನದಲ್ಲಿ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರನ್ನು ನೇರ ವಾಗಿ ಪ್ರಶ್ನಿಸಿದ್ದೆ. ಈ ಸಂದರ್ಭದಲ್ಲಿ ಭ್ರಷ್ಟಾಚಾರದ ಹಿನ್ನೆಲೆಯಲ್ಲಿ ಪ್ರಕ್ರಿಯೆ ಪೂರ್ಣಗೊಂಡಿಲ್ಲ ಎಂದು ಪ್ರಸ್ತಾವಿಸಿದ್ದೆ.

ಇದರಿಂದಾಗಿ ಕಿಮ್ಸ್‌ನಲ್ಲಿ ಒಂದಿಷ್ಟು ವೈದ್ಯರ ನೇಮಕಾತಿ ಆದೇಶ ನೀಡಲಾಯಿತು. ಆದರೆ ಮುಖ್ಯಮಂತ್ರಿ ಪ್ರತಿನಿಧಿಸುವ ಜಿಲ್ಲೆಯಲ್ಲಿ ಕಾರ್ಯಗತಗೊಳ್ಳಲಿಲ್ಲ. ಈಶ್ವರಪ್ಪ ಅವರ ಮೇಲೆ ಪಕ್ಷ ಒತ್ತಡ ತಂದು ನನ್ನಂಥವರ ಬಗ್ಗೆ ಮಾತನಾಡಿಸಿದ್ದಾರೆ ಎಂದರು.


Spread the love

About Laxminews 24x7

Check Also

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸೌರಶಕ್ತಿ ಬಲ

Spread the loveಹುಬ್ಬಳ್ಳಿ: ವಾಣಿಜ್ಯ ‌ನಗರಿ ಹುಬ್ಬಳ್ಳಿ ವಿಮಾನ ‌ನಿಲ್ದಾಣ ಅಂತಾರಾಷ್ಟ್ರೀಯ ಮಟ್ಟದ ವಿಮಾನ ನಿಲ್ದಾಣವಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ‌. ಇದರ ಭಾಗವಾಗಿ ಹುಬ್ಬಳ್ಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ