ಹಾವೇರಿ: ನಗರ ಹೊರವಲಯದ ಅಜ್ಜಯ್ಯನ ಪ್ರದೇಶದ ಬಳಿ ಇರುವ ಚೆಕ್ ಪೋಸ್ಟ್ ನಲ್ಲಿ ಅಕ್ರಮವಾಗಿ ಸಾಗಾಟವಾಗುತ್ತಿದ್ದ ಅಪಾರ ಪ್ರಮಾಣದ ಚಿನ್ನ, ಬೆಳ್ಳಿ ಆಭರಣಗಳು, ಪೂಜಾ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ಹುಬ್ಬಳ್ಳಿಯಿಂದ ದಾವಣಗೆರೆಯತ್ತ ಸಾಗುತ್ತಿದ್ದ ವಾಹನ ತಡೆದು ಪರಿಶೀಲಿಸಿದಾಗ 11 ಕೆಜಿ ಚಿನ್ನ, 74 ಕೆಜಿ ಬೆಳ್ಳಿ ಹಾಗೂ ತಟ್ಟೆ, ಲೋಟ, ಪೂಜಾ ಪರಿಕರಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದೆ. ಇವುಗಳ ಮೊತ್ತ 6.93 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಇವುಗಳ ಸಾಗಾಟ ಮಾಡುತ್ತಿದ್ದವರು ಯಾವುದೇ ಪರವಾನಗಿ ಪಡೆದಿರಲಿಲ್ಲ ಎನ್ನಲಾಗಿದೆ.
ತಹಸೀಲ್ದಾರ್ ಗಿರೀಶ ಸ್ವಾದಿ ನೇತೃತ್ವದಲ್ಲಿ ಎಲ್ಲ ವಸ್ತುಗಳನ್ನು ಜಪ್ತಿ ಮಾಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
Laxmi News 24×7