Breaking News

ರಾಜ್ಯದಲ್ಲಿ BJP ಅಧಿಕಾರ ಹಿಡಿಯುವುದು ನಿಶ್ಚಿತ- ಕೇಂದ್ರ ಸಚಿವ ಪ್ರಲ್ಹಾದ ಜೋಶಿ

Spread the love

ಚಿಕ್ಕೋಡಿ: ಮೋದಿ ಜನಪ್ರಿಯತೆ ನೋಡಿ ಕಾಂಗ್ರೆಸ್ ನಾಯಕರು ಕಂಗಾಲಾಗುತ್ತಿದ್ದಾರೆ. ಮೋದಿ ಹಾಗೆ ಕಾಂಗ್ರೆಸ್ ದಲ್ಲಿ ನಾಯಕರಿಲ್ಲ. ಮೀಸಲಾತಿ ಬಗ್ಗೆ ಜನರಿಗೆ ತಪ್ಪು ಹೇಳುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಾಂಗ್ರೆಸ್ ನಾಯಕರ ವಿರುದ್ಧ ಹರಿಹಾಯ್ದರು.

 

ನಿಪ್ಪಾಣಿ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಚಿವೆ ಶಶಿಕಲಾ ಜೊಲ್ಲೆ ಅವರ ನಾಮಪತ್ರ ಸಲ್ಲಿಸಿದ ಬಳಿಕ ಅವರು ಮಾತನಾಡಿ, ಇಡೀ ರಾಜ್ಯದಲ್ಲಿ ಬಿಜೆಪಿಗೆ ಒಳ್ಳೆಯ ವಾತಾವರಣ ನಿರ್ಮಾಣವಾಗುತ್ತದೆ. ಬಿಜೆಪಿ ಅಧಿಕಾರ ಹಿಡಿಯುವುದು ನಿಶ್ಚಿತ ಎಂದರು.

ಲಕ್ಣ್ಮಣ ಸವದಿ ಪಕ್ಷ ಬಿಟ್ಟಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು. ಸವದಿಯಿಂದ ಬಿಜೆಪಿ ಬೆಳೆದಿಲ್ಲ. ಬಿಜೆಪಿಯಿಂದ ಸವದಿ ಬೆಳೆದಿದ್ದಾರೆ. ಅವರು ಸೋತರು ಉಪಮುಖ್ಯಮಂತ್ರಿ ಮಾಡಿದ್ದು ಬಿಜೆಪಿ ಎಂಬುದು ಜನರಿಗೆ ಗೊತ್ತಿರುವ ವಿಷಯವಾಗಿದೆ. ಈ ಚುನಾವಣೆಯಲ್ಲಿ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಶೀಘ್ರವಾಗಿ ರಾಜ್ಯಕ್ಕೆ ಆಗಮೀಸಲಿದ್ದು. ಎಲ್ಲೆಲ್ಲಿ ಪ್ರಚಾರ ಮಾಡಬೇಕು ಎಂಬುದು ಎರಡು ದಿನದಲ್ಲಿ ಪಕ್ಷ ನಿರ್ಧರಿಸುತ್ತದೆ. ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿರುವ ಅಭ್ಯರ್ಥಿ ಸೋಲಿಸಲು ಪಕ್ಷ ತನ್ನದೆಯಾದ ರಣತಂತ್ರ ಹೆಣೆಯಲಿದೆ ಎಂದರು.

ಬಿಜೆಪಿ ಅಭ್ಯರ್ಥಿ ಸಚಿವೆ ಶಶಿಕಲಾ ಜೊಲ್ಲೆ. ಸಂಸದ ಅಣ್ಣಾಸಾಹೇಬ ಜೊಲ್ಲೆ. ನಗರಾದ್ಯಕ್ಷ ಪ್ರವೀಣ ಬಾಟಲೆ. ನ್ಯಾಯವಾದಿ ಅಶೋಕ ಹರಗಾಪೂರೆ. ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ದುಂಡಪ್ಪ ಬೆಂಡವಾಡೆ ಮುಂತಾದವರು ಇದ್ದರು.


Spread the love

About Laxminews 24x7

Check Also

ವರದಕ್ಷಿಣೆ ಕಿರುಕುಳ ಆರೋಪ, ಐಎಸ್‌ಡಿ ಡಿವೈಎಸ್‌ಪಿ ವಿರುದ್ಧ ಎಫ್ಐಆರ್

Spread the love ಬೆಂಗಳೂರು : ಡಿವೈಎಸ್‌ಪಿಯೊಬ್ಬರ ವಿರುದ್ಧ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. 41 ವರ್ಷದ ಮಹಿಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ