Breaking News

ಮಾಜಿ ಮುಖ್ಯಮಂತ್ರಿ ಹೆಚ್ ​ಡಿ ಕುಮಾರಸ್ವಾಮಿ ಮಣಿಪಾಲ್ ಆಸ್ಪತ್ರೆಗೆ ದಾಖಲ

Spread the love

ಜ್ವರದಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಹೆಚ್ ​ಡಿ ಕುಮಾರಸ್ವಾಮಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ಸಲಹೆ ನೀಡಿದ್ಧಾರೆ.

ರಾಮನಗರ/ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನಿರಂತರ ಪ್ರವಾಸ ಹಾಗೂ ಕಾರ್ಯಕ್ರಮಗಳ ಒತ್ತಡದಿಂದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ವೈದ್ಯರ ಸಲಹೆಯ ಮೇರೆಗೆ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ವಿಶ್ರಾಂತಿ ಇಲ್ಲದೆ ನಿರಂತರ ಪ್ರವಾಸದಿಂದ ಮಾಜಿ ಸಿಎಂ ಜ್ವರದಿಂದ ಬಳಲುತ್ತಿದ್ದು, ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ಸಲಹೆ ಮಾಡಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕುಮಾರಸ್ವಾಮಿ, ವಿಶ್ರಾಂತಿ ನಂತರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಜೆಡಿಎಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಈ ಬಗ್ಗೆ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಹೆಚ್​ಡಿಕೆ ಮನವಿ ಮಾಡಿದ್ದಾರೆ.

ಕಳೆದ ಎರಡು ದಿನದಿಂದ ವಿಶ್ರಾಂತಿಯಲ್ಲಿದ್ದ ಕುಮಾರಸ್ವಾಮಿ ನಾಳೆಯಿಂದ ಚುನಾವಣಾ ಪ್ರಚಾರಕ್ಕೆ ಇಳಿಯಲಿದ್ದಾರೆ ಎನ್ನಲಾಗಿತ್ತು. ನಿನ್ನೆ ಮತ್ತು ಇಂದು ಎಲ್ಲಾ ಕಾರ್ಯಕ್ರಮ ರದ್ದುಪಡಿಸಿ ವಿಶ್ರಾಂತಿ ಪಡೆಯುತ್ತಿದ್ದ ಹೆಚ್​​ಡಿಕೆ, ಭಾನುವಾರದಿಂದ ಮೇ 8 ರವರೆಗೆ ಜೆಡಿಎಸ್ ಅಭ್ಯರ್ಥಿಗಳ ಪರವಾಗಿ ನಿರಂತರವಾಗಿ ಪ್ರಚಾರ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಜ್ವರದ ಕಾರಣ ಎಲ್ಲ ಕಾರ್ಯಕ್ರಮಗಳು ರದ್ದುಗೊಂಡಿವೆ. ರಾಮನಗರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಚುನಾವಣಾ ಪ್ರಚಾರ ನಡೆಸಬೇಕಿತ್ತು. ನಂತರ ಸ್ವಕ್ಷೇತ್ರ ಚನ್ನಪಟ್ಟಣದ ಪ್ರಚಾರದ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಮತಯಾಚನೆ ಮಾಡುವುದು ನಿಗದಿಯಾಗಿತ್ತು.

ಚುನಾವಾಣಾ ಪ್ರಚಾರಕ್ಕೆ ಜೆಡಿಎಸ್​ ತಾರಾ ಪ್ರಚಾರಕರ ತಂಡಗಳನ್ನು ರಚಿಸಲಾಗಿದ್ದು, ಆಯಾ ತಂಡಗಳು ಪಕ್ಷದ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಲಿದ್ದಾರೆ. ಈಗಾಗಲೇ ಹಲವು ಕ್ಷೇತ್ರಗಳಲ್ಲಿ ಪಂಚರತ್ನ ರಥಯಾತ್ರೆ ಮೂಲಕ ಚುನಾವಣಾ ಪ್ರಚಾರ ನಡೆಸಿದ್ದಾರೆ. ಪಂಚರತ್ನ ಯೋಜನೆಗಳನ್ನು ಜಾರಿಗೆ ತರುವ ಭರವಸೆಯೊಂದಿಗೆ ಮತಯಾಚನೆ ಮಾಡುತ್ತಿದ್ದು, 123 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಗುರಿಯೊಂದಿಗೆ ಎಲ್ಲಾ ರೀತಿಯ ಕಾರ್ಯತಂತ್ರ ರೂಪಿಸಿದ್ದಾರೆ.


Spread the love

About Laxminews 24x7

Check Also

ಮೂನ್ನೂರು ರೂಪಾಯಿ ಹಣಕ್ಕಾಗಿ ಕಲ್ಲು ಎತ್ತಿ ಹಾಕಿ ಅಪರಿಚಿತ ವ್ಯಕ್ತಿಯ ಕೊಲೆ

Spread the loveಬಳ್ಳಾರಿ: ಕುಡಿದ ಮತ್ತಿನಲ್ಲಿ ಹಣ ನೀಡಲಿಲ್ಲ ಎನ್ನುವ ಕಾರಣಕ್ಕೆ ಅಪರಿಚಿತ ವ್ಯಕ್ತಿಯೊಬ್ಬನ ಬಳಿ ಇದ್ದ ಮೂನ್ನೂರು ರೂಪಾಯಿ ಕಸಿದುಕೊಂಡು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ