Breaking News

”ಸಿದ್ದರಾಮಯ್ಯ ಹೆದರಿಕೊಳ್ಳಲು ನಾನು ಭೂತನೂ ಅಲ್ಲಾ, ಪಿಶಾಚಿಯೂ ಅಲ್ಲ”: ವಿ. ಸೋಮಣ್ಣ

Spread the love

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ವಿ. ಸೋಮಣ್ಣ ಲೇವಡಿ ಮಾಡಿದರು. ಜೊತೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ವಿರುದ್ಧ ಕಿಡಿಕಾರಿದರು.

ಸಚಿವ ವಿ.ಸೋಮಣ್ಣ ಮಾತನಾಡಿದರುಚಾಮರಾಜನಗರ: ”ಸಿದ್ದರಾಮಯ್ಯ ಹೆದರಿಕೊಳ್ಳಲು ನಾನು ಭೂತನೂ ಅಲ್ಲಾ, ಪಿಶಾಚಿಯೂ ಅಲ್ಲ” ಎಂದು ಸಚಿವ ವಿ. ಸೋಮಣ್ಣ ಹೇಳಿದರು.

 

ವರುಣಾದಲ್ಲಿ ಸೋಲಿನ ಭೀತಿಯಿಂದ ಸಿದ್ದರಾಮಯ್ಯ ಹೆಚ್ಚು ಪ್ರಚಾರ ಮಾಡುತ್ತಿರುವ ಬಗ್ಗೆ ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ”ಅವರ ಕರ್ತವ್ಯ ಅವರು ಮಾಡುತ್ತಿದ್ದಾರೆ. ನಾನು ಭೂತನೂ ಅಲ್ಲ, ಪಿಶಾಚಿನೂ ಅಲ್ಲ. ಸಿದ್ಯರಾಮಯ್ಯ ನಾನು ಜೊತೆಯಲ್ಲಿ ಕೆಲಸ ಮಾಡಿದವರು. ಅವರು ಪ್ರಚಾರಕ್ಕೆ ಎಷ್ಟು ಬಾರಿಯಾದ್ರೂ ಬರ್ತಾರೆ. ಅವರು ಬರುವುದರಿಂದ ಮತದಾರ ಎಚ್ಚೆತ್ತುಕೊಳ್ಳುತ್ತಾರೆ” ಎಂದು ಲೇವಡಿ ಮಾಡಿದರು.

: ಬಿಜೆಪಿಯಲ್ಲಿ ಬೇಸತ್ತು ಶೆಟ್ಟರ್​​ – ಸವದಿ ಕಾಂಗ್ರೆಸ್​ ಸೇರಿದ್ದಾರೆ : ವಿಜಯಾನಂದ ಕಾಶಪ್ಪನವರ್​

ವರುಣದಲ್ಲಿ ಸಂಸದ ಪ್ರತಾಪ್ ಸಿಂಹ ಹೆಚ್ಚು ಪ್ರಚಾರ ಮಾಡುತ್ತಿರುವ ಕುರಿತು ಮಾತನಾಡಿದ ಅವರು, ”ಪ್ರತಾಪ ಅವರು ಪ್ರತಾಪ ಸಿಂಹ, ಎಲ್ಲಿಗೆ ಆದ್ಯತೆ ನೀಡಬೇಕೆಂದು ಅವರಿಗೆ ಗೊತ್ತಿದೆ. ಆತ ಓರ್ವ ಶಿಸ್ತಿನ ಸಿಪಾಯಿ, ಭವಿಷ್ಯದ ನಾಯಕ, ಪ್ರತಾಪ ಸಿಂಹನ ದೂರದೃಷ್ಟಿ ಹೈಕ್ಲಾಸ್” ಎಂದು ಶಬಬ್ಬಾಸ್ ಗಿರಿ ಕೊಟ್ಟರು.

 

ನಾನು ಸಿಎಂ ಆಗುವ ಭ್ರಮೆ ಇಟ್ಟುಕೊಂಡಿಲ್ಲ: ಬಿಜೆಪಿಯಿಂದ ಲಿಂಗಾಯತ ಸಿಎಂ ಅಸ್ತ್ರ ಬಳಕೆ ಸಂಬಂಧ ಮಾತನಾಡಿ ಅವರು, ”ಒಂದು ವರ್ಷದ ಹಿಂದೆಯೇ ಮುಂದಿನ ಚುನಾವಣೆ ಬೊಮ್ಮಾಯಿ ನೇತೃತ್ವದಲ್ಲಿ ಎಂದಿದ್ದಾರೆ. ಇದನ್ನು ನೀವು ಅರ್ಥ ಮಾಡಿಕೊಳ್ಳಬೇಕು. ಮುಂದಿನ ಸಿಎಂ ಆಗುವ ಬಗ್ಗೆ ನಾನು ಭ್ರಮೆ ಇಟ್ಟುಕೊಂಡಿಲ್ಲ. ಇನ್ನು 20 ದಿನ ಕಾಯಿರಿ ಎಲ್ಲಾ ಸರಿಹೋಗತ್ತೆ. ತಾಯಿ ಚಾಮುಂಡಿ ಏನ್ ಹೇಳ್ತಾಳೆ ಅದನ್ನು ಕೇಳ್ತೀನಿ” ಎಂದು ತಿಳಿಸಿದರು.

 

ಕಾಂಗ್ರೆಸ್​ನವರು ಹಗಲು ಕನಸು ಕಾಣುತ್ತಿದ್ದಾರೆ- ಸೋಮಣ್ಣ: ಬಿಜೆಪಿಯ ಲಿಂಗಾಯತ ಡ್ಯಾಂ ಒಡೆದಿದೆ ಎಂಬ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್​ನವರು ಹಗಲು ಕನಸು ಕಾಣುತ್ತಿದ್ದಾರೆ. ಬಿಜೆಪಿ ಲಿಂಗಾಯತ ಹಾಗೂ ಅನ್ಯ ಕೋಮಿನವರನ್ನು ಒಂದೇ ರೀತಿ ಕಾಣುತ್ತೇವೆ. ನಿಜಲಿಂಗಪ್ಪ, ವೀರೇಂದ್ರ ಪಾಟೀಲ್ ಅವರಿಗೆ ಏನಾಯ್ತು ಅಂತಾ ಎಲ್ಲರಿಗೂ ಗೊತ್ತಿದೆ” ಎಂದು ತಿರುಗೇಟು ಕೊಟ್ಟರು.


Spread the love

About Laxminews 24x7

Check Also

ಶಾಸಕ ಕೆ.ಸಿ. ವೀರೇಂದ್ರಗೆ ಸೇರಿದ ಕೆಜಿಗಟ್ಟಲೇ ಚಿನ್ನ, ಐಷಾರಾಮಿ ಕಾರುಗಳು ಸೇರಿ 100 ಕೋಟಿ ರೂ. ಗೂ ಅಧಿಕ ಮೌಲ್ಯದ ಸ್ವತ್ತು ಜಪ್ತಿ

Spread the loveಶಾಸಕ ಕೆ.ಸಿ. ವೀರೇಂದ್ರಗೆ ಸೇರಿದ ಕೆಜಿಗಟ್ಟಲೇ ಚಿನ್ನ, ಐಷಾರಾಮಿ ಕಾರುಗಳು ಸೇರಿ 100 ಕೋಟಿ ರೂ. ಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ