Breaking News

ರಾಮದುರ್ಗ ಬಂಡಾಯ ಶಮನ ಇಂದು ಮಹದೇವಪ್ಪ ನಾಮ ಪತ್ರ ವಾಪಸ..!

Spread the love

ಬೆಳಗಾವಿ: ಜಿಲ್ಲೆಯ ರಾಮದುರ್ಗ ಕ್ಷೇತ್ರದಲ್ಲಿ ಎದ್ದಿದ್ದಂತ ಬಿಜೆಪಿ ಬಂಡಾಯ ಕೊನೆಗೂ ಶಮನವಾಗಿದೆ. ಟಿಕೆಟ್ ಆಕಾಂಕ್ಷಿಯಾಗಿದ್ದಂತ ಹಾಲಿ ಶಾಸಕ ಮಹದೇವಪ್ಪ ಯಾದವಾಡ ಅವರು  ತಮ್ಮ ನಾಮಪತ್ರವನ್ನು ವಾಪಾಸ್ ಪಡೆಯುವುದಾಗಿ ಘೋಷಣೆ ಮಾಡಿದ್ದಾರೆ.

 

ಜಿಲ್ಲೆಯಲ್ಲಿ ಎದ್ದಿದ್ದಂತ ಬಂಡಾಯವನ್ನು ಶಮನಗೊಳಿಸುವಂತೆ ಬಿಜೆಪಿಯ ಶಾಸಕ ಬಸನಗೌಡ ಯತ್ನಾಳ್, ಈರಣ್ಣ ಕಡಾಡಿ ಯಶಸ್ವಿಯಾಗಿದ್ದಾರೆ. ನಿನ್ನೆ ಶಾಸಕ ಮಹದೇವಪ್ಪ ಯಾದವಾಡ ಮನೆಗೆ ಭೇಟಿ ನೀಡಿದ್ದಂತ ಅವರು,  ನಾಮಪತ್ರ ತೆಗೆದುಕೊಳ್ಳಲು ಕೊನೆಯ ದಿನವಾಗಿದ್ದು, ವಾಪಾಸ್ಸು ಪಡೆಯುವಂತೆ ಮನವೊಲಿಸಲು ಯಶಸ್ವಿಯಾಗಿದ್ದರು.

ನಾಯಕರ ಮಾತಿಗೆ ಒಪ್ಪಿದ್ದಂತ ಮಹದೇವಪ್ಪ ಯಾದವಾಡ ಅವರು, ಇಂದು ತಮ್ಮ ಬೆಂಬಲಿಗರ ಸಭೆ ಕರೆದು ತಿರ್ಮಾನ ಪ್ರಕಟಿಸುವುದಾಗಿ ಹೇಳಿದ್ದರು. ಅದರಂತೆ ಇಂದು ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ತನ್ನ ಬೆಂಬಲಿಗರ ಸಭೆಯಲ್ಲಿ ಚರ್ಚಿಸಿದ ಬಳಿಕ, ಸ್ವತಂತ್ರ ಅಭ್ಯರ್ಥಿಯಾಗಿ ತಾವು ಸಲ್ಲಿಸಿದ್ದ ನಾಮಪತ್ರವನ್ನು  ಹಿಂಪಡೆಯುವ ನಿರ್ಧಾರಕ್ಕೆ ಬರಲಾಗಿದೆ ಎಂದು ಘೋಷಿಸಿದ್ದಾರೆ.

ಅಂದಹಾಗೇ ರಾಮದುರ್ಗ ಕ್ಷೇತ್ರದಿಂದ ಶಾಸಕ ಮಹದೇವಪ್ಪ ಯಾದವಾಡ, ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೇ ಬಿಜೆಪಿ ಹೈಕಮಾಂಡ್ ಅವರಿಗೆ ನೀಡದೇ, ಚಿಕ್ಕರೇವಣ್ಣಗೆ ಟಿಕೆಟ್ ನೀಡಲಾಗಿತ್ತು. ಹೀಗಾಗಿ ರಾಮದುರ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ನಾಮಪತ್ರ ಸಲ್ಲಿಸಿದ್ದರು. ಅವರನ್ನು ನಿನ್ನೆ ಬಿಜೆಪಿ ನಾಯಕರು ಮನವೊಲೀಸಲು ಯಶಸ್ವಿಯಾದ ಪರಿಣಾಮ, ತಮ್ಮ ಉಮೇದುವಾರಿಕೆಯನ್ನು ಹಿಂಪಡೆಯಲಿದ್ದಾರೆ.


Spread the love

About Laxminews 24x7

Check Also

81 ಸಕ್ಕರೆ ಕಾರ್ಖಾನೆಗಳ ಇಳುವರಿ ಪ್ರಮಾಣ, ಸಾಗಾಟ ಮತ್ತು ಕಟಾವು ವೆಚ್ಚದ ಮಾರ್ಗಸೂಚಿಯ ಸಮಗ್ರ ವರದಿ ಇಲ್ಲಿದೆ.

Spread the loveಬೆಂಗಳೂರು: ಕಬ್ಬು ಬೆಳೆಗಾರರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ ಪ್ರತಿ ಟನ್ ಕಬ್ಬಿಗೆ 100 ರೂ. ಹೆಚ್ಚುವರಿ ದರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ