Breaking News

ಸವದಿ, ಶೆಟ್ಟರ್ ಕಾಂಗ್ರೆಸ್ ಗೆ ಹೋಗಿರೋದು ಬಿಜೆಪಿ ಗೆ ಒಳಿತಾಗಲಿದೆ

Spread the love

ದಾವಣಗೆರೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂದಿ ತೋರಿಕೆಗಾಗಿ ಲಿಂಗಾಯತ ಮಠಕ್ಕೆ ಹೋಗುತ್ತಿರುವುದಕ್ಕೆ ಧನ್ಯವಾದಗಳನ್ನು ಹೇಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ‌.
ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಸೃತಿ ಇರಾನಿ, ಸೇರಿದಂತೆ ಹಲವು ನಾಯಕರು ತಾರಾ ಪ್ರಚಾರಕರಾಗಿ ಆಗಮಿಸುತ್ತಿದ್ದಾರೆ ಎಂದರು.

ಸಿಎಂ ಆಗಬೇಕು ಎಂದು ನಾನು ಅಂದುಕೊಂಡಿರಲಿಲ್ಲ‌. ಹಿಂದೆಯೂ ಹೈಕಮಾಂಡ್ ತೀರ್ಮಾನ ಮಾಡಿದ್ದು, ಈಗಲೂ ಕೂಡ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದರು. ವರಿಷ್ಠರು ಎಲ್ಲವನ್ನೂ ಗಮನಿಸುತ್ತಿರುವುದಾಗಿ ತಿಳಿಸಿದರು.

ಡಿಕೆಶಿ ಹೇಳುವುದು ಒಂದು ಮಾಡೋದು ಒಂದು
ಭಾವನೆಗಳ ಜೊತೆ ಬಿಜೆಪಿ ಆಟವಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿ
ಲಿಂಗಾಯತ ವಿವಾದಗಳನ್ನು ತೆಗೆದಿದ್ದೇ ಅವರು. ಡಿಕೆಶಿ ಹೇಳುವುದು ಒಂದು ಮಾಡೋದು ಒಂದು . ದೇವರು ಯಾರಿಗೆ ಆಶೀರ್ವಾದ ಮಾಡ್ತಾರೆ ಎಂದು ಕಾದು ನೋಡೋಣ ಎಂದು ತಿಳಿಸಿದರು.

ಪುತ್ರನ ಪರ ಮಾಡಾಳ್ ವಿರೂಪಾಕ್ಷಪ್ಪ ಪ್ರಚಾರ:

ಪುತ್ರನ ಪರ ಅವರು ಪ್ರಚಾರ ಮಾಡುತ್ತಿದ್ದು, ಹೈಕಮಾಂಡ್ ಎಲ್ಲವನ್ನು ಗಮನಿಸುತ್ತಿದೆ. ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು.

ಸವದಿ, ಶೆಟ್ಟರ್ ಕಾಂಗ್ರೆಸ್ ಗೆ ಹೋಗಿರೋದು ಬಿಜೆಪಿ ಗೆ ಒಳಿತಾಗಲಿದೆ

ಕಳೆದ ಬಾರಿಗಿಂತ ಈ ಬಾರಿ ನಮಗೆ ಮತಗಳು ಹೆಚ್ಚಾಗಲಿವೆ ಎಂದರು.
ಕಾಂಗ್ರೆಸ್ ಮಿತ್ರರಿಗೆ ನಾನು ಧನ್ಯವಾದ ಹೇಳಲು ಇಷ್ಟ ಪಡುತ್ತೇನೆ ಎಂದರು. ಸವದಿ, ಶೆಟ್ಟರ್ ಕಾಂಗ್ರೆಸ್ ಗೆ ಹೋಗಿರೋದು ಬಿಜೆಪಿ ಗೆ ಪ್ಲಸ್ ಆಗುತ್ತದೆ. ಅವರ ಕ್ಷೇತ್ರದಲ್ಲಿ ಅವರ ವಿರುದ್ದ ಜನರು ಮಾತನಾಡುತ್ತಿದ್ದಾರೆ.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ