ತುಮಕೂರು: ಸಂಸತ್ತಿನಲ್ಲಿ ಕಣ್ಣೀರು ಹಾಕಿಸಿದ ನಾಯಕನಿಗೆ ಕಣ್ಣೀರು ತರಿಸಿದರಷ್ಟೇ ತನ್ನ ಆತ್ಮಕ್ಕೆ ಶಾಂತಿ ಸಿಗುತ್ತದೆ ಎಂದು ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡ (HD Deve Gowda) ಹೇಳಿದರು.
ಜಿಲ್ಲೆಯ ಮಧುಗಿರಿಯಲ್ಲಿ ಮಾತನಾಡಿದ ಅವರು, ನಾನು ಹಿಂದೆ ನಡೆದಿದ್ದನ್ನು ಮೆಲುಕು ಹಾಕಿ ನೋಡಲೂ ಹೋಗುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದುಕೊಂಡಿರಲಿಲ್ಲ. ಚುನಾವಣಾ ರಾಜಕೀಯ ಸಾಕಾಗಿದೆ ಅಂತಾ ಹಿಂದೆಯೇ ಹೇಳಿದ್ದೆ. ತುಮಕೂರಿನ ಕೆಲವು ಮುಖಂಡರು ನನ್ನನ್ನು ಬಲಿಪಶು ಮಾಡಿದ್ರು ಅಂತಾ ಹೇಳಲ್ಲ.
ಅವರ ಹೆಸರು ಕೂಡ ಹೇಳೋಕೆ ಹೋಗಲ್ಲ. ಆದರೆ ಸಂಸತ್ತಿನಲ್ಲಿ ನಿಂತು ಕಣ್ಣೀರು ಹಾಕುವ ಕೆಟ್ಟ ಸಂದರ್ಭ ತಂದರು. ಆ ನಾಯಕನ ಕಣ್ಣಲ್ಲಿ ನೀರು ತರಿಸಬೇಕು, ಆಗ ನನ್ನ ಆತ್ಮಕ್ಕೆ ಶಾಂತಿ ಸಿಗುತ್ತದೆ ಎಂದರು.