Breaking News

ಬಿಜೆಪಿ ನಾಯಕರ ವಿರುದ್ಧ ದೂರು ದಾಖಲಿಸಲಿದ ಕಾಂಗ್ರೆಸ್

Spread the love

ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು, ಕರ್ನಾಟಕ ಉಸ್ತುವಾರಿಗಳಾಗಿರುವ ರಣದೀಪ್ ಸಿಂಗ್ ಸುರ್ಜೇವಾಲ ರವರು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ನೇತೃತ್ವದ ನಿಯೋಗದ ಕಾಂಗ್ರೆಸ್ ಮುಖಂಡರು ಇಂದು ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಬಿಜೆಪಿ ನಾಯಕರ ವಿರುದ್ಧ ದೂರು ದಾಖಲಿಸಲಿದ್ದಾರೆ.

ವರುಣಾ ಹಾಗೂ ಚಮರಾಜನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ದೂರು ನೀಡಿದ್ದಾರೆ. ಸಚಿವ ವಿ.ಸೋಮಣ್ಣ ಚಾಮರಾಜನಗರ ಜೆಡಿಎಸ್ ಅಭ್ಯರ್ಥಿಗೆ ಆಮಿಷವೊಡ್ಡಿದ್ದಾರೆ. ಚುನಾವಣಾ ಪ್ರಚಾರದ ವೇಳೆ ಅಮಿತ್ ಶಾ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗಲಾಟೆಗಳು ನಡೆಯುತ್ತವೆ. ಘರ್ಷಣೆ, ಗಲಭೆಗಳು ಹೆಚ್ಚಾಗುತ್ತವೆ ಎಂದು ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ವಿ.ಸೋಮಣ್ಣ ಹಾಗೂ ಅಮಿತ್ ಶಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಹತ್ತರಗಿ ಟೋಲ್ ಗೇಟ್ ಬಳಿ ಕಲ್ಲು ತೂರಾಟ

Spread the loveಚಿಕ್ಕೋಡಿ (ಬೆಳಗಾವಿ): ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಗೇಟ್ ಬಳಿಯ ರಾಷ್ಟ್ರೀಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ