Breaking News

ಚುನಾವಣೆ ನಡೆಸುತ್ತಿರುವುದುಚುನಾವಣಾ ಆಯೋಗವೋ? BJP ಪಕ್ಷವೋ? : ಸಿದ್ದರಾಮಯ್ಯ ಆಕ್ರೋಶ

Spread the love

ಬೆಂಗಳೂರು:ರಾಜ್ಯದಲ್ಲಿ ಚುನಾವಣೆ ನಡೆಸುತ್ತಿರುವುದುಚುನಾವಣಾ ಆಯೋಗವೋ?

ಭಾರತೀಯ ಜನತಾ ಪಕ್ಷವೋ? ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸಚಿವೆ ಶೋಭಾ ಕರಂದ್ಲಾಚೆ ಬಿಜೆಪಿ ಜಿಲ್ಲಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಅಭ್ಯರ್ಥಿಗಳು ಹಾಗೂ ಚುನಾವಣೆ ಏಜಂಟರಿಗೆ ಬರೆದ ಪತ್ರದ ಕುರಿತು ಪ್ರಸ್ತಾಪಿಸಿ ಪತ್ರಿಕಾ ಹೇಳಿಕೆ ನೀಡಿರುವ ಸಿದ್ದರಾಮಯ್ಯ, ಪಕ್ಷದ ಪದಾಧಿಕಾರಿಗಳು ನಿರ್ಧರಿಸಲಿರುವುದು ಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆಗಳನ್ನೋ? ಬಿಜೆಪಿ ಪರ ಮತ್ತು ವಿರೋಧಿ ಮತದಾರರು ಇರುವ ಮತಗಟ್ಟೆಗಳನ್ನೋ? ಎಂದು ಪ್ರಶ್ನಿಸಿದ್ದಾರೆ.

ತಮ್ಮ ಪಕ್ಷದ ಪರವಾಗಿಲ್ಲದ ಮತದಾರರು ಇರುವ ಮತಗಟ್ಟೆಗಳಲ್ಲಿ‌ ಭದ್ರತೆಯ ನೆಪದಲ್ಲಿ ಕೇಂದ್ರ ಸೇನಾಪಡೆಗಳನ್ನು ನಿಯೋಜಿಸಿ ಮತದಾರರನ್ನು ಬೆದರಿಸಿ ಅವರು ಮತದಾನ ಮಾಡದಂತೆ ತಡೆಯುವುದು ಈ ಪತ್ರದ ದುರುದ್ದೇಶವಾಗಿದೆ. ಚುನಾವಣಾ ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಮತ್ತು ವಿಡಿಯೋ ರೆಕಾರ್ಡಿಂಗ್ ಮಾಡುವ ಹೊಣೆ ಚುನಾವಣಾ ಆಯೋಗದಲ್ಲವೇ? ಇದನ್ನು ನಡೆಸಲು ರಾಜಕೀಯ ಪಕ್ಷಕ್ಕೆ ಅನುಮತಿ ಕೊಟ್ಟವರು ಯಾರು? 

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರೇ ಈ ಪತ್ರ ಬರೆದಿರುವುದನ್ನು ನೋಡಿದರೆ ಕೇಂದ್ರ ಸರ್ಕಾರವೇ ಈ ಅಕ್ರಮ ಚಟುವಟಿಕೆಯಲ್ಲಿ ಷಾಮೀಲಾಗುರುವುದು ಸ್ಪಷ್ಟವಾಗಿದೆ. 

ಕೇಂದ್ರ ಚುನಾವಣಾ ಆಯುಕ್ತರು ತಕ್ಷಣ ಮಧ್ಯೆಪ್ರವೇಶಿಸಿ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ವಿಚಾರಣೆಗೊಳಪಡಿಸಿ ಅವರು ಯಾವುದೇ ಚುನಾವಣಾ ಪ್ರಚಾರದಲ್ಲಿ ಭಾಗವಹಿಸದಂತೆ ನಿಷೇಧಿಸಬೇಕು. ಅವರು ಪಕ್ಷದ ನಾಯಕರು ಮತ್ತು ಅಭ್ಯರ್ಥಿಗಳಿಂದ ಪಡೆದಿರುವ ಮಾಹಿತಿಯನ್ನು ವಶಕ್ಕೆ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ಕೆ.ಎನ್.ರಾಜಣ್ಣ ಮನೆಗೆ ವಿವಿಧ ಮಠಾಧೀಶರ ಭೇಟಿ:

Spread the love ತುಮಕೂರು: ಸಚಿವ ಸಂಪುಟದಿಂದ ವಜಾಗೊಂಡಿರುವ ಕೆ.ಎನ್.ರಾಜಣ್ಣ ಅವರ ನಿವಾಸಕ್ಕೆ ವಿವಿಧ ಮಠಗಳ 15ಕ್ಕೂ ಹೆಚ್ಚು ಸ್ವಾಮೀಜಿಗಳು ಭಾನುವಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ