Breaking News

ಚುನಾವಣಾ ಅಕ್ರಮ : ರಾಜ್ಯಾದ್ಯಂತ 286 ಕೋಟಿ ರೂ. ಮೌಲ್ಯದ ನಗದು, ವಸ್ತುಗಳು ಜಪ್ತಿ

Spread the love

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮಗಳನ್ನು ತಡೆಯಲು ಕಾರ್ಯಾಚರಣೆ ನಡೆಸುತ್ತಿರುವ ಚುನಾವಣಾಧಿಕಾರಿಗಳು ರಾಜ್ಯಾದ್ಯಂತ ಈವರೆಗೆ 100 ಕೋಟಿ ರೂ. ನಗದು ವಶಪಡಿಸಿಕೊಂಡಿದ್ದಾರೆ.

ಗುರುವಾರ ಒಂದೇ ದಿನ ವಿವಿಧ ತನಿಖಾ ಸಂಸ್ಥೆಗಳು 4.60 ಕೋಟಿ ರೂ.

ನಗದನ್ನು ಜಪ್ತಿ ಮಾಡಿವೆ. ಈ ಮೂಲಕ ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ರಾಜ್ಯದಲ್ಲಿ ಒಟ್ಟು 100 ಕೋಟಿ ರೂ. ನಗದು ವಶಪಡಿಸಿಕೊಂಡಿದ್ದಾರೆ.

ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದಲ್ಲಿ 1.91 ಕೋಟಿ ರೂ. ನಗದು ವಶಪಡಿಸಿಕೊಳ್ಳಲಾಗಿದೆ. 85 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು 3.49 ಲಕ್ಷ ರೂ. ಮೌಲ್ಯದ 5 ಕೆ.ಜಿ ಬೆಳ್ಳಿ ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಮೂಲಕ ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ರಾಜ್ಯದಲ್ಲಿ 100.33 ಕೋಟಿ ರೂ. ನಗದು, 22.06 ಕೋಟಿ ರೂ. ಮೌಲ್ಯದ ಉಚಿತ ಕೊಡುಗೆಗಳನ್ನು ಜಪ್ತಿ ಮಾಡಲಾಗಿದೆ.

66.35 ಕೋಟಿ ರೂ. ಮೌಲ್ಯದ 17.28 ಲಕ್ಷ ಲೀಟರ್ ಮದ್ಯ, 16.98 ಕೋಟಿ ರೂ. ಮೌಲ್ಯದ 1.249 ಕೆಜಿ ಮಾದಕ ವಸ್ತುಗಳು. 76.01 ಕೋಟಿ ರೂ. ಮೌಲ್ಯದ 149.31 ಕೆ.ಜಿ ಚಿನ್ನ, 4.43 ಕೋಟಿ ರೂ. ಮೌಲ್ಯದ 636.46 ಕೆ.ಜಿ ಬೆಳ್ಳಿ ವಶಕ್ಕೆ ಪಡೆದುಕೊಳ್ಳಲಾಗಿದೆ. ಒಟ್ಟು 80.44 ಕೋಟಿ ರೂ ಮೊತ್ತ ಚಿನ್ನ ಹಾಗೂ ಬೆಳ್ಳಿ ವಸ್ತುಗಳನ್ನು ಜಪ್ತಿ ಮಾಡಲಾಗಿದ್ದು, ಒಟ್ಟು 286.17 ಕೋಟಿ ರೂ.ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

ರಾಜ್ಯಾದ್ಯಂತ 2.178 ಎಫ್ ಐಆರ್. 69,801 ಶಸ್ತ್ರಾಸ್ತ್ರಗಳನ್ನು ಜಮೆ ಮಾಡಿಸಿಕೊಳ್ಳಲಾಗಿದೆ. ಸಿಆರ್ ಪಿಸಿ ಕಾಯ್ದೆಯ ಡಿ5,240 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಚುನಾವಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.


Spread the love

About Laxminews 24x7

Check Also

ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ ‌ತನಿಖೆಯನ್ನು ನಡೆಸಬೇಕೆಂದು ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘ ಪ್ರತಿಭಟನೆ

Spread the loveಬೆಳಗಾವಿ ;ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ