ಬೆಂಗಳೂರು : ಬೆಂಗಳೂರಿನಲ್ಲಿ ಲಂಚ ಸ್ವೀಕರಿಸುತ್ತಿದ್ದ ಬಿಬಿಎಂಪಿ ಆರೋಗ್ಯಾಧಿಕಾರಿ(BBMP Health Officer) ಲೋಕಾಯುಕ್ತ ಬಲೆ( Lokayukta Raid)ಗೆ ಬಿದ್ದಿದ್ದಾರೆ.
ವಿಧಾನ ಸಭೆ ಚುನಾವಣೆ ಹೊಸ್ತಿಲಿನಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಿನ ಸಿ.ವಿ ರಾಮನ್ ನಗರದ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಬಿಬಿಎಂಪಿ ಆರೋಗ್ಯಾಧಿಕಾರಿ ವಿ.ಶಿವೇಗೌಡ 50 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಸಿಲುಕಿದ್ದಾರೆ.
ಸೊಳ್ಳೆ ನಿಯಂತ್ರಕ್ಕಾಗಿ ಶ್ರೀನಿವಾಸ್ ಎಂಬುವರು ಗುತ್ತಿಗೆ ಪಡೆದಿದ್ದರು. ಇದಕ್ಕಾಗಿ ಬಿಬಿಎಂಪಿ ಆರೋಗ್ಯಾಧಿಕಾರಿ 80 ಸಾವಿರ ಲಂಚ ಕೇಳಿದ್ದರು.ಈಗಾಗಲೇ ಮುಂಗಡವಾಗಿ ವಿ.ಶಿವೇಗೌಡ 30 ಸಾವಿರ ಲಂಚವನ್ನು ಪಡೆದುಕೊಂಡಿದ್ದರು. ಇನ್ನುಳಿದ 50 ಸಾವಿರ ರೂಪಾಯಿ ಪಡೆಯುವ ಸಂದರ್ಭದಲ್ಲಿ ಲೋಕಾಯುಕ್ತ ಬಲೆ( Lokayukta Raid)ಗೆ ಬಿದ್ದಿದ್ದಾರೆ ಎಂದು ತಿಳಿಯಲಾಗಿದೆ.
ಶಿಮ್ಲಾ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅವಘಡ , 250 ಜನರ ಸ್ಥಳಾಂತರ
ಶಿಮ್ಲಾ: ಹಿಮಾಚಲ ಪ್ರದೇಶದ ಶಿಮ್ಲಾದ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಆಸ್ಪತ್ರೆಯ ಅಡುಗೆ ಮನೆಯಲ್ಲಿ ಎರಡು ಗ್ಯಾಸ್ ಸಿಲಿಂಡರ್‌ಗಳು ಸ್ಫೋಟಗೊಂಡ ಪರಿಣಾಮ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ250 ಜನರನ್ನು ಸ್ಥಳಾಂತರಿಸಲಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.