Breaking News

ದಾಸರಹಳ್ಳಿ ಪಿ.ಎನ್ ಕೃಷ್ಣಮೂರ್ತಿ ಹಾಗು ಮುಖಂಡರು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದರು

Spread the love

ದಾಸರಹಳ್ಳಿ ಟಿಕೆಟ್ ಆಕಾಂಕ್ಷಿಯಾಗಿದ್ದ ಪಿ.ಎನ್ ಕೃಷ್ಣಮೂರ್ತಿ ಹಾಗು ಕೊರಟಗೆರೆ ಕಾಂಗ್ರೆಸ್ ಮುಖಂಡರು ಇಂದು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದರು.ಬೆಂಗಳೂರು: ಟಿಕೆಟ್ ವಂಚಿತರಿಂದ ಪಕ್ಷಾಂತರ ಪರ್ವ ಮುಂದುವರೆದಿದ್ದು, ಕಳೆದ ಬಾರಿಯ ಪರಾಜಿತ ಅಭ್ಯರ್ಥಿ ಹಾಗೂ ದಾಸರಹಳ್ಳಿ ಟಿಕೆಟ್ ಆಕಾಂಕ್ಷಿಯಾಗಿದ್ದ ಪಿ.ಎನ್ ಕೃಷ್ಣಮೂರ್ತಿ ಹಾಗು ಕೊರಟಗೆರೆ ಕಾಂಗ್ರೆಸ್ ಮುಖಂಡರು ಇಂದು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದರು.

ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಕಳೆದ ಸಲ ದಾಸರಹಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಆಗಿದ್ದ ಕೃಷ್ಣಮೂರ್ತಿ ಸಚಿವ ಮುನಿರತ್ನ, ಸಚಿವ ಅಶ್ವತ್ಥ ನಾರಾಯಣ ಸಮ್ಮುಖದಲ್ಲಿ ಸೇರ್ಪಡೆಯಾದರು. ಕೊರಟಗೆರೆ ಕ್ಷೇತ್ರದ ಮಾಜಿ ಜಿ.ಪಂ ಸದಸ್ಯೆ ಸಿ ವಿ ರಂಗಮ್ಮ, ಮಾಜಿ ಸದಸ್ಯ ಮಧು ಕೂಡ ಬಿಜೆಪಿ ಸೇರ್ಪಡೆಯಾದರು. ಕೊರಟಗೆರೆ ಬಿಜೆಪಿ ಅಭ್ಯರ್ಥಿ ಅನಿಲ್ ಕುಮಾರ್ ನೇತೃತ್ವದಲ್ಲಿ ಈ ನಾಯಕರು ಬಿಜೆಪಿ ಸೇರ್ಪಡೆಯಾಗಿದ್ದು, ಬಿಜೆಪಿ ಮುಖಂಡರು ಪಕ್ಷದ ಧ್ವಜ ನೀಡಿ ಬರಮಾಡಿಕೊಂಡರು.

ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಸಚಿವ ಅಶ್ವತ್ಥ ನಾರಾಯಣ್ ಮಾತನಾಡಿ, ಇಂದು ಕಾಂಗ್ರೆಸ್​ನ ಹಿರಿಯ ನಾಯಕ ಕೃಷ್ಣಮೂರ್ತಿ ಮತ್ತು ಅವರ ಜೊತೆ ಮುನಿರತ್ನ ನಾಯಕತ್ವದಲ್ಲಿ ಬಿಜೆಪಿ ಸೇರಿದ್ದಾರೆ. ಕೃಷ್ಣಮೂರ್ತಿ ಅವರ ಜೊತೆ ಬಂದವರಿಗೆ ಸ್ಚಾಗತ ಕೋರುತ್ತೇನೆ. ಕೊರಟಗೆರೆ ಕ್ಷೇತ್ರ ಅಭ್ಯರ್ಥಿ ಅನಿಲ್ ಕುಮಾರ್ ಐಎಎಸ್ ಅಭ್ಯರ್ಥಿ. ಕೊರಟಗೆರೆಯಲ್ಲಿ ಅನಿಲ್ ಕುಮಾರ್ ಗೆಲ್ಲಲಿದ್ದಾರೆ. ಇಂದು ಪಕ್ಷ ಸೇರ್ಪಡೆಯಾದವರಿಂದ ಮೂರು ಕಡೆ ಗೆಲ್ಲಲು ಅನುಕೂಲ ಆಗಲಿದೆ ಎಂದರು.

ನಂತರ ಮಾತನಾಡಿದ ಕೃಷ್ಣಮೂರ್ತಿ, ಬಿಜೆಪಿಯಲ್ಲಿ ಒಗ್ಗಟ್ಟಿದೆ, ನಾಯಕತ್ವ ಇದೆ. ಅಶ್ವತ್ಥ ನಾರಾಯಣ್ ಹಾಗೂ ಮುನಿರತ್ನ ಅವರ ಸಮ್ಮುಖದಲ್ಲಿ ಸೇರ್ಪಡೆ ಆಗಿದ್ದೇವೆ. ಅನಿಲ್ ಕುಮಾರ್ ನೇತೃತ್ವದಲ್ಲಿ ಪ್ರಾಮಾಣಿಕವಾಗಿ ಬಿಜೆಪಿ ಸೇರ್ಪಡೆ ಆಗಿದ್ದೇನೆ. 2013ರಲ್ಲಿ ಡಿಕೆ ಶಿವಕುಮಾರ್ ಅವರು ಕನಕಪುರದ ಬಂಡೆ ಅಂತೆಲ್ಲ ಹೇಳಿದ್ದೀರಿ. ನಿಜವಾಗಿ ಹೇಳಬೇಕೆಂದರೆ ಅವರು ಒಕ್ಕಲಿಗ ವಿರೋಧಿ. 2013ರಿಂದ ಸತತವಾಗಿ ಕೆಲಸ ಮಾಡಿಕೊಂಡು ಬಂದರೂ ಟಿಕೆಟ್ ನೀಡಲಿಲ್ಲ.

ಡಿಕೆ ಶಿವಕುಮಾರ್ ಅವರ ಸಹೋದರ, ನನ್ನಿಂದ ಕಾಂಗ್ರೆಸ್ ಅಂತ ಹೇಳುತ್ತಿದ್ದಾರೆ. ಇಂದು ಕಾಂಗ್ರೆಸ್ ಪಕ್ಷ ನಿರ್ನಾಮ ಮಾಡುತ್ತಿರುವ ಡಿಕೆಶಿಗೆ ಹೇಳುತ್ತೇನೆ, ನಿಮ್ಮ ಜೊತೆ ಇರೋರಿಗೆ ಮರ್ಯಾದೆ ಕೊಡದಿದ್ದರೆ ಪಕ್ಷ ಉಳಿಯಲ್ಲ. ಸಿಎಂ‌ ಆಗೋ ಕನಸು ಕಾಣುತ್ತಿದ್ದೀರ, ಖಂಡಿತ ನೀವು ಸಿಎಂ ಆಗಲ್ಲ ಎಂದರು.

ಪರಮೇಶ್ವರ್ ಅವರೇ ಅಷ್ಟು ಬಾರಿ ಗೆದ್ದಿದ್ದೀರಾ ಕ್ಷೇತ್ರಕ್ಕೆ ನಿಮ್ಮ ಕೊಡುಗೆ ಏನು?: ಕೋಟ್ಯಂತರ ಅನುದಾನ ತಂದಿರೋದಾಗಿ ಹೇಳುತ್ತಿದ್ದೀರಾ. ಯಾವ ಕೆಲಸ ಮಾಡಿದ್ದೀರಾ.? ಅನಿಲ್ ಕುಮಾರ್ ಅನುಭವಿ ಆಡಳಿತಗಾರ ಇದ್ದಾರೆ. ಅವರನ್ನು ಗೆಲ್ಲಿಸೋದು ನಮ್ಮ ಉದ್ದೇಶ. ಪರಮೇಶ್ವರ್ ಅವರಿಗೆ ಹೇಳುತ್ತೇನೆ. ನನ್ನ ಸಂಪೂರ್ಣ ಬೆಂಬಲ ಅನಿಲ್ ಕುಮಾರ್ ಅವರಿಗೆ. ಉಳಿದಿರೋ ದಿನಗಳಲ್ಲಿ ಪ್ರಾಮಾಣಿಕವಾಗಿ ಅನಿಲ್ ಕುಮಾರ್ ಪರ ಕೆಲಸ ಮಾಡಿ, ಅವರನ್ನು ಗೆಲ್ಲಿಸುತ್ತೇನೆ. ದಾಸರಹಳ್ಳಿಯಲ್ಲಿ ಕೆಲಸ ಮಾಡಿದೆ. ಆದರೆ ನನಗೆ ಟಿಕೆಟ್ ನೀಡಿಲ್ಲ. ಬಿಜೆಪಿಗೆ ಬಂದಿದ್ದೇನೆ, ಬಿಜೆಪಿ ಜೊತೆ ಇರುತ್ತೇನೆ ಎಂದು ತಿಳಿಸಿದರು.

ಮುಂದೆ, ಬಿಜೆಪಿ ಅಭ್ಯರ್ಥಿ ಅನಿಲ್ ಕುಮಾರ್ ಮಾತನಾಡಿ, ಕೃಷ್ಣಮೂರ್ತಿ ಅವರು ಕಾಂಗ್ರೆಸ್ ಪಕ್ಷ ತೊರೆದು, ಬಿಜೆಪಿ ತತ್ವ ಸಿದ್ದಾಂತ ಒಪ್ಪಿ ಬಂದಿದ್ದಾರೆ. ಪಕ್ಷ ಹಾಗೂ ವೈಯಕ್ತಿಕವಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಬಿಜೆಪಿ ಪಕ್ಷದಲ್ಲಿ ಮುಂದೆ ಬರುವ ಚುನಾವಣೆಯಲ್ಲಿ 150 ಸೀಟು ಗೆಲ್ಲುತ್ತೇವೆ. ಇದರೊಂದಿಗೆ ಸರ್ಕಾರ ರಚನೆ ಮಾಡುತ್ತೇವೆ.ಇವರ ಸೇರ್ಪಡೆಯಿಂದ ಕೊರಟಗೆರೆ ಕ್ಷೇತ್ರಕ್ಕೆ ಆನೆ ಬಲ ಬಂದಂತಾಗಿದೆ. ಚುನಾವಣೆ ಫಲಿತಾಂಶ ದಿನ ಅವರ ಸೇರ್ಪಡೆಗೆ ಪಾಸಿಟಿವ್ ರೆಸ್ಪಾನ್ಸ್ ಕಂಡುಬರಲಿದೆ ಎಂದರು


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ