Breaking News

ಬೆಚ್ಚಿಬೀಳಿಸುವಂತಿದೆ ಈ ವಿಡಿಯೋ: ಹಾಡಹಗಲೇ ಶಿಕ್ಷಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ

Spread the love

ತ್ತರಪ್ರದೇಶ ಮಿರ್ಜಾಪುರದ ಕಾಲೇಜೊಂದರಲ್ಲಿ ಶಿಕ್ಷಕರೊಬ್ಬರು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ವಿಡಿಯೋ ವೈರಲ್ ಆಗಿದೆ.ಟ್ವಿಟರ್ ನಲ್ಲಿ ಈ ವಿಡಿಯೋ ಹಂಚಿಕೊಂಡಿರುವ ಸಾಮಾಜಿಕ ಜಾಲತಾಣ ಬಳಕೆದಾರರಾದ ಅರುಣೇಶ್ ಯಾದವ್ ಅವರು “ಅತ್ಯಾಚಾರಿಗಳಿಗೆ ಮುಕ್ತ ಹಸ್ತ ನೀಡಿರುವುದು ನಮ್ಮ ರಾಜ್ಯದ ದುರದೃಷ್ಟಕರ ಘಟನೆ.

ಸರ್ಕಾರಿ ಕೈಗಾರಿಕಾ ಸಂಸ್ಥೆಯ ಐಟಿಐ ಕಾಲೇಜಿನ ಈ ವೀಡಿಯೊ ವೈರಲ್ ಆಗುತ್ತಿದೆ. ಶಿಕ್ಷಕರೊಬ್ಬರು ಬಲವಂತವಾಗಿ ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿದ್ದಾರೆ” ಎಂದು ವಿಡಿಯೋವನ್ನ ಉತ್ತರಪ್ರದೇಶ ಪೊಲೀಸರಿಗೆ ಟ್ಯಾಗ್ ಮಾಡಿ ಕ್ರಮ ಕೈಗೊಳ್ಳುವಂತೆ ಕೇಳಿಕೊಂಡಿದ್ದರು.

ಪೋಸ್ಟ್ ಹಂಚಿಕೊಂಡಿರುವ ಡಾ. ಅರುಣೇಶ್ ಕುಮಾರ್ ಯಾದವ್ ಅವರು ತಮ್ಮನ್ನು ಭೌತಶಾಸ್ತ್ರದ ಪ್ರಾಧ್ಯಾಪಕ, ಸಾಮಾಜಿಕ ಕಾರ್ಯಕರ್ತ ಮತ್ತು ಕಿಸಾನ್ ನಾಯಕ ಎಂದು ಹೇಳಿಕೊಂಡಿದ್ದಾರೆ.

ವಿಡಿಯೋ ನೋಡಿದ ತಕ್ಷಣವೇ ಉತ್ತರ ಪ್ರದೇಶದ ಪೊಲೀಸರು ಆರೋಪಿತ ಶಿಕ್ಷಕನನ್ನ ಬಂಧಿಸಿದ್ದಾರೆ. ಬಂಧಿತ ಶಿಕ್ಷಕನ ವಿಡಿಯೋ ಹಂಚಿಕೊಂಡಿರುವ ಪೊಲೀಸರು ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಶಿಕ್ಷಕನ ಹೆಸರು ವಿಜಯ್ ಸಿಂಗ್. ಅವರು ಕತ್ರಾದ ಐಟಿಐ ಕಾಲೇಜಿನಲ್ಲಿ ಶಿಕ್ಷಕರಾಗಿದ್ದಾರೆ. ದೂರು ಸ್ವೀಕರಿಸಿದ 24 ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಮಿರ್ಜಾಪುರದ ಎಸ್ಪಿ ಸಂತೋಷ್ ಮಿಶ್ರಾ ಹೇಳಿದ್ದಾರೆ. ಹೋಳಿ ಹಬ್ಬ ಆಚರಣೆ ವೇಳೆ ಈ ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾ

https://twitter.com/i/status/1651442165753733120


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ