Breaking News

3 ವರ್ಷ ಪ್ರೀತಿಸಿ ಒಂದು ತಿಂಗ್ಳ ಹಿಂದೆ ಮದುವೆ – ದಂಪತಿ ಆತ್ಮಹತ್ಯೆ

Spread the love

ಚೆನ್ನೈ: ಪ್ರೀತಿಸಿ ಒಂದು ತಿಂಗಳ ಹಿಂದೆಯಷ್ಟೆ ಮದುವೆಯಾಗಿದ್ದ ದಂಪತಿ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರುವ ಘಟನೆ ತಮಿಳುನಾಡಿನಲ್ಲಿ ತಿರುವಣ್ಣಾಮಲೈ ಜಿಲ್ಲೆಯಲ್ಲಿ ನಡೆದಿದೆ.

ಜಯಕುಮಾರ್ ಮತ್ತು ವಿಜಯಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡಿರುವ ದಂಪತಿ. ತಿರುವಣ್ಣಾಮಲೈ ಜಿಲ್ಲೆಯ ಜಯಕುಮಾರ್ ಮತ್ತು ಕೃಷ್ಣಗಿರಿ ಜಿಲ್ಲೆಯ ಕಲ್ಲೂರು ಗ್ರಾಮದ ವಿಜಯಲಕ್ಷ್ಮಿ ಕಳೆದ ಮೂರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರು ತಮ್ಮ ಪ್ರೀತಿಯ ಬಗ್ಗೆ ಮನೆಯಲ್ಲಿ ತಿಳಿಸಿದ್ದಾರೆ. ಆರಂಭದಲ್ಲಿ ಕುಟುಂಬ ಸದಸ್ಯರು ಇವರ ಪ್ರೀತಿಗೆ ಒಪ್ಪಿಗೆ ನೀಡಲಿಲ್ಲ.

ಜಯಕುಮಾರ್ ಮತ್ತು ವಿಜಯಲಕ್ಷ್ಮಿ ನಾವು ಬೇರೆಯವರ ಜೊತೆ ಮದುವೆಯಾಗುವುದಿಲ್ಲ ಎಂದು ಹಠ ಮಾಡಿದ್ದಾರೆ. ಕೊನೆಗೆ ಎರಡು ಕುಟುಂಬದವರು ಅವರ ಮದುವೆಗೆ ಸಮ್ಮತಿಸಿದ್ದಾರೆ. ನಂತರ ಲಾಕ್‍ಡೌನ್ ಇದ್ದರೂ ಕೂಡ ಏಪ್ರಿಲ್ 6 ರಂದು ಕುಟುಂಬಗಳ ಸಮ್ಮುಖದಲ್ಲಿ ಸರಳವಾಗಿ ದೇವಾಲಯವೊಂದರಲ್ಲಿ ಇವರಿಬ್ಬರ ವಿವಾಹ ನಡೆಯಿತು.

ಮದುವೆಯ ನಂತರ ಜಯಕುಮಾರ್ ಮತ್ತು ವಿಜಯಲಕ್ಷ್ಮಿ ತಿರುವಣ್ಣಾಮಲೈ ಜಿಲ್ಲೆಯ ಗ್ರಾಮವೊಂದರಲ್ಲಿ ವಾಸಿಸುತ್ತಿದ್ದರು. ಆದರೆ ಮೂರು ದಿನಗಳಿಂದ ಇಬ್ಬರು ಮನೆಯಿಂದ ಹೊರಗೆ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ಸ್ಥಳೀಯರು ಅವರ ಮೆನೆಗೆ ಹೋಗಿ ನೋಡಿದಾಗ ದಂಪತಿ ರೂಮಿನಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಗ್ರಾಮಸ್ಥರು ತಕ್ಷಣ ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದರು.

ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿ ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಇಬ್ಬರೂ ಪ್ರೀತಿಸಿ ಮದುವೆಯಾಗಿದ್ದರು. ಹೀಗಾಗಿ ಯಾವುದೇ ಜಗಳ ಇರಲಿಲ್ಲ. ಆದರೂ ಅವರು ಏಕೆ ಆತ್ಮಹತ್ಯೆ ಮಾಡಿಕೊಂಡರು ಎಂದು ತಿಳಿದಿಲ್ಲ ಎಂದು ಕುಟುಂಬದವರು ಹೇಳಿದ್ದಾರೆ.

ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಶುರು ಮಾಡಿದ್ದಾರೆ.


Spread the love

About Laxminews 24x7

Check Also

ಬೆಳಗಾವಿಯಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆ!!

Spread the love ಬೆಳಗಾವಿಯಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆ!! ದೇಶದಲ್ಲಿನ ಎಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ