Breaking News

ಚುನಾವಣಾ ಅಕ್ರಮದ ಅಬ್ಬರ: 300 ಕೋಟಿ ರೂ. ಗಡಿ ದಾಟಿದ ಒಟ್ಟು ಜಪ್ತಿ ಮೊತ್ತ

Spread the love

ಬೆಂಗಳೂರು : ರಾಜ್ಯದಲ್ಲಿ ಈ ಬಾರಿ ಚುನಾವಣಾ ಅಕ್ರಮಗಳು ಜೋರಾಗೆ ನಡೆಯುತ್ತಿವೆ.

ಚುನಾವಣೆಗೆ ಇನ್ನು 12 ದಿ‌ನಗಳು ಬಾಕಿ ಇರುವಾಗಲೇ ಬರೋಬ್ಬರಿ 302 ಕೋಟಿ ರೂ. ಅಕ್ರಮ ನಗದು, ಮದ್ಯ, ಉಡುಗೊರೆಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವ ಬಗ್ಗೆ ಚುನಾವಣಾ ಆಯೋಗ ಪ್ರಕಟಣೆ ಹೊರಡಿಸಿದೆ.

ವಿಧಾನಸಭೆ ಚುನಾವಣೆ ಘೋಷಣೆಯಾದಾಗಿನಿಂದ ಈವರೆಗೆ ಚುನಾವಣಾ ಆಯೋಗ ಸುಮಾರು 302.78 ಕೋಟಿ ರೂ. ಮೌಲ್ಯದ ನಗದು, ಮದ್ಯ ಮತ್ತು ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಇದೇ ಅವಧಿಯಲ್ಲಿ 115 ಕೋಟಿ ರೂ. ಅಕ್ರಮ ನಗದು, ಮದ್ಯ, ಉಡುಗೊರೆಗಳನ್ನು ವಶಕ್ಕೆ ಪಡೆಯಲಾಗಿತ್ತು. ಈ ಬಾರಿ ಈಗಾಗಲೇ ಒಟ್ಟು 300 ಕೋಟಿ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದ್ದು, ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ 117 ಕೋಟಿ ರೂ. ಹೆಚ್ಚುವರಿ ಜಪ್ತಿ ಮಾಡಲಾಗಿದೆ‌. ಸುಮಾರು 68% ಹೆಚ್ಚಿನ ಮೊತ್ತದ ಕುರುಡು ಕಾಂಚಾಣವನ್ನು ಜಪ್ತಿ ಮಾಡಲಾಗಿದೆ.

ಈವರೆಗೆ ಚುನಾವಣಾ ಆಯೋಗ, ಐಟಿ, ಪೊಲೀಸ್ ಇಲಾಖೆ, ಕಣ್ಗಾವಲು ಪಡೆ ಒಟ್ಟು 109.14 ಕೋಟಿ ರೂ. ಮೌಲ್ಯದ ನಗದನ್ನು ಜಪ್ತಿ ಮಾಡಿದೆ. 22.14 ಕೋಟಿ ರೂ. ಮೊತ್ತದ ಉಡುಗೊರೆಗಳನ್ನು ವಶಕ್ಕೆ ಪಡೆಯಲಾಗಿದೆ. ಈವರೆಗೆ ಒಟ್ಟು 70.70 ಕೋಟಿ ಮೌಲ್ಯದ 19,10,746 ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ. 18.29 ಕೋಟಿ ಮೌಲ್ಯದ 1,438 ಕೆ.ಜಿ. ಮಾದಕ ವಸ್ತು ಜಪ್ತಿ ಮಾಡಲಾಗಿದೆ. ಈವರೆಗೆ ಒಟ್ಟು 76.05 ಕೋಟಿ ರೂ. ಬಂಗಾರ ಜಪ್ತಿ ಮಾಡಿದ್ದರೆ, 4.44 ಕೋಟಿ ರೂ.‌ಮೌಲ್ಯದ ಬೆಳ್ಳಿ ವಶಕ್ಕೆ ಪಡೆಯಲಾಗಿದೆ. ನಗದು, ಮದ್ಯ, ಮಾದಕ ದ್ರವ್ಯ, ಬೆಲೆಬಾಳುವ ಲೋಹ ಮತ್ತು ಉಡುಗೊರೆ ವಸ್ತುಗಳನ್ನು ವಶಪಡಿಸಿಕೊಂಡಿರುವ ವಿಚಕ್ಷಣ ದಳ, ಸ್ಥಿರ ಕಣ್ಗಾವಲು ತಂಡಗಳು ಮತ್ತು ಪೊಲೀಸ್ ಅಧಿಕಾರಿಗಳು ಒಟ್ಟು 2,288 ಪ್ರಥಮ ತನಿಖಾ ವರದಿ (FIR) ದಾಖಲಿಸಿದ್ದಾರೆ.

 

ಚುನಾವಣೆ ಘೋಷಣೆಯಾದ ದಿನಾಂಕದಿಂದ ಇಲ್ಲಿಯವರೆಗೆ ಒಟ್ಟಾರೆ 69,819 ಶಸ್ತ್ರಾಸ್ತ್ರಗಳನ್ನು ಜಮೆ ಮಾಡಿಸಿಕೊಳ್ಳಲಾಗಿದೆ. 18 ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. 20 ಶಸ್ತ್ರಾಸ್ತ್ರಗಳ ಪರವಾನಿಗೆ ರದ್ದು ಪಡಿಸಲಾಗಿದೆ. ಸಿಆರ್‌ಪಿಸಿ ಕಾಯ್ದೆಯಡಿ 5,422 ಪ್ರಕರಣಗಳನ್ನು ದಾಖಲಿಸಲಾಗಿದೆ. ಅವುಗಳಲ್ಲಿ 9,896 ವ್ಯಕ್ತಿಗಳಿಂದ ಮುಚ್ಚಳಿಕೆ ಪತ್ರ ಪಡೆಯಲಾಗಿದೆ. ಚುನಾವಣೆ ಘೋಷಣೆಯಾದ ದಿನದಿಂದ ಇಲ್ಲಿಯವರೆಗೆ 15,182 ಜಾಮೀನು ರಹಿತ ವಾರೆಂಟ್‌ಗಳನ್ನು ಜಾರಿಗೊಳಿಸಲಾಗಿದೆ.

ಅಬಕಾರಿ ಇಲಾಖೆ 2,939 ಗಂಭೀರ ಪ್ರಕರಣಗಳನ್ನು ಹಾಗೂ 2,687 ಮದ್ಯದ ಪರವಾನಿಗೆ ಉಲ್ಲಂಘಿಸಿದ ಪ್ರಕರಣಗಳು, 89 ಎನ್‌ಡಿಪಿಎಸ್‌ ಮತ್ತು ಕರ್ನಾಟಕ ಅಬಕಾರಿ ಕಾಯ್ದೆ 1955ರ ಪರಿಚ್ಛೇದ 15 (ಎ) ಅನ್ವಯ ಒಟ್ಟು 28,127 ಪ್ರಕರಣಗಳನ್ನು ದಾಖಲಿಸಿದೆ. ಮತ್ತು 2,020 ವಿವಿಧ ಮಾದರಿಯ ವಾಹನಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ರಾಜ್ಯ ಚುನಾವಣಾ ಆಯೋಗ ಮಾಹಿತಿ ನೀಡಿದೆ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ