Breaking News

ನೀತಿಸಂಹಿತೆ ಉಲ್ಲಂಘನೆ: ಬಿಜೆಪಿ ಅಭ್ಯರ್ಥಿ ಪಿ.ರಾಜೀವ್ ಸೇರಿ ಇಬ್ಬರ ವಿರುದ್ಧ ಪ್ರಕರಣ ದಾಖಲು

Spread the love

ಬೆಳಗಾವಿ, ಏ.30(ಕರ್ನಾಟಕ ವಾರ್ತೆ): ಕುಡಚಿ ಮತಕ್ಷೇತ್ರದಲ್ಲಿ ಏ.29 ರಂದು ನಡೆದ ಬಿಜೆಪಿ ಸಮಾವೇಶಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಜನರನ್ನು ಸೇರಿಸಲು ಹಣ ಹಂಚಿಕೆ ಮಾಡಿ ಆಮಿಷ ತೋರಿಸಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಪಿ.ರಾಜೀವ ಸೇರಿದಂತೆ ಇಬ್ಬರ ವಿರುದ್ಧ ಮಾದರಿ ನೀತಿಸಂಹಿತೆ ಉಲ್ಲಂಘನೆ ಪ್ರಕರಣ ದಾಖಲು ಮಾಡಲಾಗಿರುತ್ತದೆ.

ಮಾನ್ಯ ಪ್ರಧಾನಮಂತ್ರಿಗಳು ಭಾಗವಹಿಸಿದ್ದ ಬಿಜೆಪಿ ಪಕ್ಷದ ಬಹಿರಂಗ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಸೇರಿಸುವ ಉದ್ಧೇಶದಿಂದ ಮುಗಳಖೋಡ ಪಟ್ಟಣದ ಬಳಿ ಏ.29 ರಂದು ಹಣ ಹಂಚಿಕೆ ಮಾಡಿ ಆಮಿಷ ತೋರಿಸಲಾಗಿದೆ ಎಂದು ಖಾಸಗಿ ಟಿವಿ ವರದಿಯ ಕುರಿತು ಸಾಮಾಜಿಕ ಜಾಲತಾಣದಲ್ಲಿನ ಪ್ರತಿಕ್ರಿಯೆ ಆಧರಿಸಿ ದೂರು ನೀಡಲಾಗಿರುತ್ತದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕುಡಚಿ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ರಾಜೀವ್ ಹಾಗೂ ಮುಗಳಖೋಡದ ಹಾಲಪ್ಪ ಹನಮಂತ ಶೇಗುಣಸಿ ಎಂಬುವರ ವಿರುದ್ಧ ಸರಕಾರಿ ಅಧಿಕಾರಿ ಅಭಿಷೇಕ್ ಪಾಂಡೆ ಅವರು ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಭಾನುವಾರ (ಏ.30) ದೂರು ನೀಡಿರುತ್ತಾರೆ.
*


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ