ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನಾಳೆ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ್, ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ ಜಿ ಪರಮೇಶ್ವರ ಮತ್ತಿತರ ಮುಖಂಡರು ನಾಳೆ ಮಂಗಳವಾರ ಬೆಳಗ್ಗೆ 9.00 ಗಂಟೆಗೆ ಬೆಂಗಳೂರಿನ ವಸಂತನಗರದ ಶಾಂಘರಿಲಾ ಹೋಟೆಲ್ ನಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಲಿದ್ದಾರೆ.
ಈಗಾಗಲೇ 6 ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿರುವ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಮತ್ತಷ್ಟು ಮಹತ್ವದ ಅಂಶಗಳನ್ನು ಘೋಷಣೆ ಮಾಡುವ ನಿರೀಕ್ಷೆ ಇದೆ.
Laxmi News 24×7