Breaking News

104ರ ವೃದ್ಧೆ ಮತದಾನ:

Spread the love

ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳಲ್ಲಿ ಸೋಮವಾರ ಮತದಾನ (Voting) ಪ್ರಾರಂಭವಾಗಿದೆ. ಅರ್ರೆ ಮೇ 10ಕ್ಕೆ ಮತದಾನ ಅಲ್ವೆ ಎಂದು ನೀವು ಹೇಳಬಹುದು.

ಚುನಾವಣಾ ಆಯೋಗ ಇದೇ ಮೊದಲಬಾರಿಗೆ ರಾಜ್ಯದಲ್ಲಿ ವಿಶೇಷ ಚೇತನರು ಮತ್ತು 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡುವುದಕ್ಕೆ ಅವಕಾಶ ಮಾಡಿಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ವಯೋವೃದ್ಧರು ತಮ್ಮ ಮನೆಯಿಂದಲೇ ಮತ ಚಲಾಯಿಸಿದ್ದಾರೆ. ಬ್ಯಾಲೆಟ್ ಪೇಪರ್ ಮೂಲಕ ಮಾಡುವ ಮತದಾನದ ಪ್ರಕ್ರಿಯೆಯನ್ನು ಏಪ್ರಿಲ್ 29 ರಿಂದ ಪ್ರಾರಂಭಿಸಲಾಗಿದ್ದು, ಮೇ 6 ರಂದು ಕೊನೆಗೊಳ್ಳಲಿದೆ

104ರ ವೃದ್ಧೆ ಮತದಾನ:
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲ್ಲೂಕಿನ ಹಿತ್ಲಳ್ಳಿ ಗ್ರಾಮದ 104ರ ವೃದ್ಧೆ ಸುಬ್ಬಿ ಗೋಪಾಲಕೃಷ್ಣ ಭಟ್ ಅವರು ತಮ್ಮ ಮನೆಯಿಂದಲೇ ಮತವನ್ನು ಚಲಾಯಿಸಿದ್ದು ಜಿಲ್ಲೆಯಲ್ಲಿ ಅತ್ಯಂತ ಹಿರಿಯ ಮತದಾರರು ಇವರಾಗಿದ್ದಾರೆ. 


Spread the love

About Laxminews 24x7

Check Also

ಮೃತ ಸರ್ಕಾರಿ ವೈದ್ಯಾಧಿಕಾರಿ ಕೊಠಡಿಯಲ್ಲಿ ಮಾಟಮಂತ್ರ: ಸಾವಿನ ಸುತ್ತ ಅನುಮಾನದ ಹುತ್ತ

Spread the loveಕೋಲಾರ, ಜುಲೈ 07: ಜಿಲ್ಲೆ ಮಾಲೂರು ತಾಲ್ಲೂಕಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ಅವರು ತಮ್ಮ ಉತ್ತಮ ಸೇವೆಯಿಂದಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ