Breaking News

ಮಂಗಲಾ‌ ಅಂಗಡಿ, ಈರಣ್ಣ ಕಡಾಡಿ, ಮಹಾಂತೇಶ ಕವಟಗಿಮಠ, ಮೇಲೆ ಪ್ರಕರಣ ದಾಖಲ

Spread the love

ಬೆಳಗಾವಿ: ಸಂಸದೆ ಮಂಗಲಾ‌ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ವಿಧಾನ ಪರಿಷತ್ ಮಾಜಿ ಸಚೇತಕ ಮಹಾಂತೇಶ ಕವಟಗಿಮಠ ಮತ್ತು ಮಲಪ್ರಭಾ ಶುಗರ್ಸ್ ಮಾಜಿ ಅಧ್ಯಕ್ಷ ಮೋಹನ ಸಂಬರಗಿ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ.

ಈ ಕುರಿತು ಕುರಿತು ನಂದಗಡ ಠಾಣೆಯಲ್ಲಿ ಬುಧವಾರ ಎಫ್ಐಆರ್ ದಾಖಲಿಸಲಾದೆ.

ಇವರೆಲ್ಲರೂ ಮಂಗಳವಾರ ರಾತ್ರಿ ಖಾನಾಪುರ ತಾಲೂಕಿನ ಹಿರೇಮುನವಳ್ಳಿ ಗ್ರಾಮದಲ್ಲಿ ಲಿಂಗಾಯತ ಸಮಾಜದ 500 ಕ್ಕೂ ಹೆಚ್ಷು ಮುಖಂಡರನ್ನು ಸೇರಿಸಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಕೈಗೊಂಡಿದ್ದರು. ಆದರೆ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದ ಎಲ್ಲರಿಗೂ ಊಟದ ವ್ಯವಸ್ಥೆ ಮಾಡಿದ್ದರು. ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿರುವ ಕಾರಣ ಚುನಾವಣೆಯ ನೀತಿ ಸಂಹಿತೆ ಪಾಲನೆಯ ಅಧಿಕಾರಿ ರಾಜೇಂದ್ರ ಅವರು ದೂರು ದಾಖಲಿಸಿದ್ದಾರೆ.


Spread the love

About Laxminews 24x7

Check Also

ನಿಧಿಯಾಸೆಗೆ ದೇವರ ಕಲ್ಲನ್ನು ಕೆಡವಿದ್ದ ಕಳ್ಳರನ್ನು ಬಂಧಿಸಿದ ಪೊಲೀಸರು: ಮೂಕಪ್ಪಸ್ವಾಮಿ ಪವಾಡ ಎಂದ ಗ್ರಾಮಸ್ಥರು

Spread the loveಹಾವೇರಿ: 4 ತಿಂಗಳ ಹಿಂದೆ ನಿಧಿ ಆಸೆಗಾಗಿ ಕೋಣಕಲ್ಲು ಭರಮಪ್ಪ ದೇವರ ಕಲ್ಲನ್ನು ಕೆಡವಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ