ದೊಡ್ಡಬಳ್ಳಾಪುರ: ನಗರದ ತಾಲ್ಲೂಕು ಕಚೇರಿ ವೃತ್ತದಲ್ಲಿ ಬುಧವಾರ ಬಜರಂಗದಳ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸುಡುವ ಮೂಲಕ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಜರಂಗದಳದ ಕೋಲಾರ ವಿಭಾಗದ ಸಂಯೋಜಕ ನರೇಶ್ ರಡ್ಡಿ, ಹಿಂದೂಗಳ ಹಾಗೂ ಹಿಂದೂ ಧರ್ಮದ ರಕ್ಷಣೆಗಾಗಿ ಕೆಲಸ ಮಾಡುತ್ತಿರುವ ಬಜರಂಗದಳವನ್ನು ನಿಷೇಧ ಮಾಡುವ ಕೆಲಸಕ್ಕೆ ಮುಂದಾದರೆ ಕಾಂಗ್ರೆಸ್ ನಿಷೇದಿಸುವ ಕೆಲಸಕ್ಕೆ ನಾವು ಮುಂದಾಗುತ್ತೇವೆ.
ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಮಾಡುವ ಪ್ರಸ್ತಾಪವನ್ನು ಈ ಕೂಡಲೆ ಹಿಂದಕ್ಕೆ ಪಡೆಯುವಂತೆ ಆಗ್ರಹಿಸಿದರು.