Breaking News

ಬಜರಂಗದಳ ನಿಷೇಧ ಯಾರಿಂದಲೂ ಸಾಧ್ಯವಿಲ್ಲ:B,S.Y.

Spread the love

ಬೆಂಗಳೂರು: ”ಬಜರಂಗದಳ ನಿಷೇಧ ಮಾಡಲು ಯಾವನಿಂದಲೂ ಸಾಧ್ಯವಿಲ್ಲ, ಕಾಂಗ್ರೆಸ್‌ನವರು ಹುಚ್ಚುಹುಚ್ಚಾಗಿ ಮಾತನಾಡುತ್ತಿದಾರೆ, ಜನ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ” ಎಂದು ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್ ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಅಧಿಕೃತ ನಿವಾಸ ಕಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜರಂಗದಳ ನಿಷೇಧ ಮಾಡುವುದಾಗಿ ಕಾಂಗ್ರೆಸ್ ಮೂರ್ಖ ನಿರ್ಧಾರ ತಗೊಂಡಿದೆ. ಕಾಂಗ್ರೆಸ್​ನವರ ಈ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ಬಜರಂಗದಳವನ್ನು ಯಾವನಿಂದಲೂ ಬ್ಯಾನ್ ಮಾಡೋಕೆ ಸಾಧ್ಯ ಇಲ್ಲ ಹುಚ್ಚುಚ್ಚರ ತರ ಆಡುತ್ತಿರುವ ಕಾಂಗ್ರೆಸ್ ನಾಯಕರಿಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದರು.

ಈಗ ಮಂಡ್ಯ, ಕೆಆರ್ ಪೇಟೆಗೆ ಹೋಗುತ್ತಿದ್ದೇನೆ ಸಂಜೆ ದಾವಣಗೆರೆ ಮೂಲಕ ನಾಳೆ ನನ್ನ ಪ್ರವಾಸ ಮುಂದುವರಿಯಲಿದೆ, ವಾತಾವರಣ ನಮ್ಮ ನಿರೀಕ್ಷೆ ಮೀರಿ ಚೆನ್ನಾಗಿದೆ. 135 ಸೀಟು ಗೆದ್ದು ಸರ್ಕಾರ ರಚಿಸೋದು ನಿಶ್ಚಿತ. ನಾವು ಯಾರ ಬೆಂಬಲವೂ ಇಲ್ಲದೇ ಸರ್ಕಾರ ರಚಿಸುತ್ತೇವೆ. ಮೋದಿ ಅಮಿತ್ ಶಾ ಅವರ ಪ್ರವಾಸದಿಂದ ವಾತಾವರಣ ಪಕ್ಷದ ಪರ ಮತ್ತಷ್ಟು ಹೆಚ್ಚಾಗಿ ಕಂಡು ಬರುತ್ತಿದೆ. ಬೆಂಗಳೂರಲ್ಲಿ ಮೋದಿ ರೋಡ್ ಶೋ ಮಾಡುತ್ತಿದ್ದಾರೆ. ಇದರಿಂದ ಪಕ್ಷದ ಮೇಲೆ ಪರಿಣಾಮ ಆಗಿ, ಪಕ್ಷ ಗೆಲುವಿಗೆ ಸಹಕಾರಿ ಆಗಲಿದೆ ಎಂದರು.


Spread the love

About Laxminews 24x7

Check Also

2025 – 26 ಹಂಗಾಮಿನಲ್ಲಿ ರೈತರಿಗೆ ಪ್ರತಿ ಟನ್ ಕಬ್ಬಿಗೆ 100 ರೂ. ಹೆಚ್ಚಿಸಿ ಸರ್ಕಾರದಿಂದ ಅಧಿಕೃತ ಆದೇಶ

Spread the love ಬೆಂಗಳೂರು: 2025-26ನೇ ಹಂಗಾಮಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಹೆಚ್ಚುವರಿ ಕಬ್ಬು ಬೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ