Breaking News

ನಮಗೆ ಮಾತ್ರ ನೋಟೀಸ್ ನೀಡಿದ್ದು ಯಾಕೆ?

Spread the love

ಬೆಂಗಳೂರು: ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿ ಕಾಂಗ್ರೆಸ್ ಜಾಹೀರಾತು ಪ್ರಕಟಿಸಿರುವ ವಿಚರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಚುನಾವಣಾ ಆಯೋಗ ನೋಟೀಸ್ ನೀಡಿರುವ ವಿಚಾರವಾಗಿ ಮಾತನಾಡಿರುವ ಡಿ.ಕೆ.ಶಿವಕುಮಾರ್, ನಮಗೆ ನೀಡಿರುವ ನೋಟೀಸ್ ಗೆ ನಾನು ಉತ್ತರ ಕೊಟ್ಟಿದ್ದೇನೆ. ಈಗ ಆಧಾರವೇನು ಎಂದು ಕೇಳಿದ್ದಾರೆ. ಬಿಜೆಪಿ ನಾಯಕರ ಹೇಳಿಕೆ ಮೇಲೆಯೇ ನಾವು ಪ್ರಚಾರ ಮಾಡಿದ್ದೇವೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಚುನಾವಣಾ ಆಯೋಗಕ್ಕೆ ಉತ್ತರ ನೀಡಿದ ಬಳಿಕ ಈಗ ಆಧಾರ ಏನು ಎಂದು ಕೇಳಿದ್ದಾರೆ. ಬಿಜೆಪಿ ನಾಯಕರಾದ ಯತ್ನಾಳ್, ವಿಶ್ವನಾಥ್, ಗೂಳಿಹಟ್ಟಿ ಶೇಖರ್ ಅವರ ಹೇಳಿಕೆ ಮೇಲೆಯೇ ನಾವು ಪ್ರಚಾರ ಮಾಡಿದ್ದೇವೆ ಎಂದರು.

ನಮಗೆ ಮಾತ್ರ ನೋಟೀಸ್ ನೀಡಿದ್ದು ಯಾಕೆ? ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೋಮುಗಲಭೆಯಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ. ಅವರಿಗೆ ಯಾಕೆ ನೋಟಿಸ್ ಕೊಟ್ಟಿಲ್ಲ? ಅವರಿಗೂ ನೋಟೀಸ್ ಕೊಡಬೇಕಲ್ವೆ? ಯಾಕೆ ಕೊಟ್ಟಿಲ್ಲ? ಅವರಿಗೆ ಯಾಕೆ ನೋಟೀಸ್ ಕೊಟ್ಟಿಲ್ಲ? ಎಂದು ಕಿಡಿಕಾರಿದ್ದಾರೆ.

ಬಿಜೆಪಿಯವರಿಗೆ ಪಕ್ಷ ನಡೆಸಲು ಬಂಧಿಲ್ಲ. ಅದಕ್ಕೆ ಪ್ರಧಾನಿ ಮೋದಿಯವರು ಇಲ್ಲಿ ಬಂದು ಬೀದಿ ಬೀದಿ ರೋಡ್ ಶೋ ಅಲೆದಾಡುತ್ತಿದ್ದಾರೆ ಎಂದು ಟೀಕಿಸಿದರು.


Spread the love

About Laxminews 24x7

Check Also

ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿಗೆ 2:1ರ ಅನುಪಾತ: ಗೆಜೆಟ್ ಅಧಿಸೂಚನೆ ಪ್ರಕಟ

Spread the loveಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಗೆ ರಾಜ್ಯ ಸರ್ಕಾರವು ನಿಯಮಗಳನ್ನು ರೂಪಿಸಿ ಗೆಜೆಟ್ ಅಧಿಸೂಚನೆ ಪ್ರಕಟಿಸಿದೆ. ಅದರಂತೆ, ಪ್ರಾಥಮಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ