Breaking News

141 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ಡಿ.ಕೆ.ಶಿ.

Spread the love

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೇವಲ 2 ದಿನಗಳು ಬಾಕಿಯಿದ್ದು, ರಾಜಕೀಯ ಪಕ್ಷಗಳ ನಾಯಕರು ಮತದಾರರ ಮನವೊಲಿಸಲು ಕೊನೇ ಹಂತದ ಕಸರತ್ತು ನಡೆಸಿದ್ದಾರೆ. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಕಾಂಗ್ರೆಸ್ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದರೆ, ಕಾಂಗ್ರೆಸ್ ಮುಳುಗುತ್ತಿರುವ ಹಡಗು, ಈಬಾರಿ ಬಿಜೆಪಿ ಸ್ವಂತ ಬಲದಿಂದ ಸರ್ಕಾರ ರಚನೆ ಮಾಡಲಿದೆ ಎಂದು ಕಮಲ ನಾಯಕರು ಹೇಳುತ್ತಿದ್ದಾರೆ.

ವಿಧಾನಸಭಾ ಚುನಾವನೆಯಲ್ಲಿ ಕಾಂಗ್ರೆಸ್ 141 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬರಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ. ಮೇ 15ರಂದು ಕಾಂಗ್ರೆಸ್ ಸರ್ಕಾರದ ಮೊದಲ ಸಂಪುಟದ ಸಭೆ ನಡೆಯಲಿದೆ. ಚುನಾವಣಾ ಪ್ರಚಾರದಲ್ಲಿ ಘೋಷಿಸಿದ 5 ಗ್ಯರಂಟಿ ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದರು.

ಮೇ 15ರಂದು ಮುಖ್ಯಮಂತ್ರಿ ಸ್ಥಾನದ ಬಗ್ಗೆ ಮಲ್ಲಿಕಾರ್ಜುನ ಖರ್ಗೆಯವರು ಘೋಷಣೆ ಮಾಡಲಿದ್ದಾರೆ ಎಂದು ತಿಳಿಸಿದರು.


Spread the love

About Laxminews 24x7

Check Also

81 ಸಕ್ಕರೆ ಕಾರ್ಖಾನೆಗಳ ಇಳುವರಿ ಪ್ರಮಾಣ, ಸಾಗಾಟ ಮತ್ತು ಕಟಾವು ವೆಚ್ಚದ ಮಾರ್ಗಸೂಚಿಯ ಸಮಗ್ರ ವರದಿ ಇಲ್ಲಿದೆ.

Spread the loveಬೆಂಗಳೂರು: ಕಬ್ಬು ಬೆಳೆಗಾರರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ ಪ್ರತಿ ಟನ್ ಕಬ್ಬಿಗೆ 100 ರೂ. ಹೆಚ್ಚುವರಿ ದರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ