Breaking News

ಯುವ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆ

Spread the love

ಕಲಬುರಗಿ : ಯುವ ಪ್ರೇಮಿಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಜಿಲ್ಲೆಯ ಕಮಲಾಪುರ್ ತಾಲೂಕಿನ ಡೊಂಗರಗಾಂವ್ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಅಕ್ಷತಾ ಭರಣಿ (19) ಹಾಗೂ ಪಾಂಡುರಂಗ್ ಕಿಣ್ಣಿ(20) ಎಂದು ಗುರುತಿಸಲಾಗಿದೆ. ಗ್ರಾಮದ ಹೊರವಲಯದ ನಿರ್ಜನ ಪ್ರದೇಶದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಇಬ್ಬರ ಶವಗಳು ಪತ್ತೆಯಾಗಿವೆ. ಯುವ ಪ್ರೇಮಿಗಳ ಸಾವಿಗೆ ಕಾರಣ ತಿಳಿದುಬಂದಿಲ್ಲ. ಮೇಲ್ನೋಟಕ್ಕೆ ಕುಟುಂಬಸ್ಥರ ವಿರೋಧದಿಂದ ಸಾವಿಗೆ ಶರಣಾಗಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

ಮೃತರಿಬ್ಬರು ಕಳೆದ ಕೆಲ ದಿನಗಳಿಂದ ಪರಸ್ಪರ ಪ್ರೀತಿಸುತ್ತಿದ್ದರಂತೆ. ಕಳೆದ ಶುಕ್ರವಾರ ಬೆಳಗ್ಗೆ ಮನೆಯಿಂದ ಇಬ್ಬರು ನಾಪತ್ತೆಯಾಗಿದ್ದರು. ಮೊಬೈಲ್ ಕೂಡಾ ಸ್ವಿಚ್ ಆಫ್ ಆಗಿತ್ತು. ಇಬ್ಬರ ಮನೆಯವರು ಸಾಕಷ್ಟು ಹುಡುಕಾಟ ನಡೆಸಿದ್ದರೂ ಪತ್ತೆಯಾಗಿರಲಿಲ್ಲ. ಈ ಸಂಬಂಧ ಕಮಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ನಿರ್ಜನ ಪ್ರದೇಶದಲ್ಲಿ ನೇಣು ಬಿಗಿದು ಪತ್ತೆಯಾದ ಶವಗಳನ್ನು ಕಂಡು ಕುರಿಗಾಹಿಗಳು ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಕಮಲಾಪುರ್ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಅಡ್ವೋಕೇಟ್ ಸಾವು : ಕಲಬುರಗಿಯ ಸೇಡಂ ರಸ್ತೆಯಲ್ಲಿನ ಗೀತಾ ನಗರ ಬಳಿ ಸಂಭವಿಸಿದ್ದ ಕಾರು ಮತ್ತು ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನ್ಯಾಯವಾದಿಯೊಬ್ಬರು ಇಂದು ಮೃತಪಟ್ಟಿದ್ದಾರೆ. ಮೃತರನ್ನು ಮುಗಳಿ ಗ್ರಾಮದ ಸಿದ್ರಾಮಪ್ಪ ಎಂದು ಗುರುತಿಸಲಾಗಿದೆ.


Spread the love

About Laxminews 24x7

Check Also

ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಲ್ಲಿನ ತಾಲೂಕು ಆಡಳಿತಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿವೆ.

Spread the loveಶಿವಮೊಗ್ಗ/ಉತ್ತರಕನ್ನಡ: ರಾಜ್ಯದ ಮಲೆನಾಡು ಭಾಗದ ಹಲವೆಡೆ ಮತ್ತೆ ಮಳೆಯ ಆರ್ಭಟ ಮುಂದುವರೆದಿದೆ. ಭಾರಿ ವರ್ಷಧಾರೆ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ