Breaking News

ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವ ನಿಟ್ಟಿನಲ್ಲಿ ಅಗತ್ಯ ಭದ್ರತಾ ವ್ಯವಸ್ಥೆ: ಡಾ.ಎಂ.ಬಿ.ಬೋರಲಿಂಗಯ್ಯ

Spread the love

ಬೆಳಗಾವಿ: ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವ ನಿಟ್ಟಿನಲ್ಲಿ ಅಗತ್ಯ ಭದ್ರತಾ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತರಾದ ಡಾ.ಎಂ.ಬಿ.ಬೋರಲಿಂಗಯ್ಯ ಹೇಳಿದರು.

ಕೇಂದ್ರ ಮೀಸಲು ಪಡೆ, ಪೊಲೀಸ್ ಮೀಸಲು ಪಡೆ, ಗೃಹರಕ್ಷಕ ದಳ ಹಾಗೂ ನಾಗರಿಕ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗುತ್ತಿದೆ.

4803 ನಾಗರಿಕ ಪೊಲೀಸ್, 1354 ಗೃಹರಕ್ಷಕ ದಳ ಸಿಬ್ಬಂದಿ, 19 ಕೆ.ಎಸ್.ಆರ್.ಪಿ. ತುಕಡಿ, 249 ಸಶಸ್ತ್ರ ಮೀಸಲು ಪಡೆ ಹಾಗೂ 53 ಕೇಂದ್ರೀಯ ಸಶಸ್ತ್ರ ಕಂಪೆನಿಗಳನ್ನು ಜಿಲ್ಲೆಯಲ್ಲಿ ಚುನಾವಣಾ ಭದ್ರತೆಗೆ ನಿಯೋಜಿಸಲಾಗಿದೆ ಎಂದರು.

ಇಬ್ಬರು ಪೊಲೀಸ್ ವೀಕ್ಷಕರ ಮಾರ್ಗದರ್ಶನದಲ್ಲಿ ಅಗತ್ಯ ಭದ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಡಾ.ಬೋರಲಿಂಗಯ್ಯ ತಿಳಿಸಿದರು.

ನೆರೆಯ ರಾಜ್ಯಗಳೊಡನೆ ಸಮನ್ವಯತೆ:

9 ಸಾವಿರಕ್ಕೂ ಅಧಿಕ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಜಿಲ್ಲೆಯಲ್ಲಿ ನಿಯೋಜಿಸಲಾಗಿದೆ. ಗೋವಾ, ಮಹಾರಾಷ್ಟ್ರ ದಿಂದ ಗೃಹರಕ್ಷಕ ಸಿಬ್ಬಂದಿ ಆಗಮಿಸಿರುತ್ತಾರೆ. ಎಲ್ಲರನ್ನೂ ಬಳಸಿಕೊಂಡು ಭಯಮುಕ್ತ ಮತದಾನದ ವಾತಾವರಣವನ್ನು ಸೃಷ್ಟಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ತಿಳಿಸಿದರು.
ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿದ್ದವರನ್ನು ಗುರುತಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ನೆರೆಯ ಮಹಾರಾಷ್ಟ್ರ ಮತ್ತು ಗೋವಾ ರಾಜ್ಯದ ಉನ್ನತ ಪೊಲೀಸ್ ಅಧಿಕಾರಿಗಳ ಜತೆ ಚರ್ಚಿಸಲಾಗಿರುತ್ತದೆ. ಕೊನೆಯ ಗಳಿಗೆಯಲ್ಲಿ ನಡೆಯುವ ಅಕ್ರಮ ತಡೆಗಟ್ಟಲು ಜಂಟಿ ಚೆಕ್ ಪೋಸ್ಟ್ ಗಳನ್ನು ಕೂಡ ಸ್ಥಾಪಿಸಲಾಗಿದೆ ಎಂದರು.

ಮತದಾರರಿಗೆ ಆಮಿಷ ಒಡ್ಡುವುದನ್ನು ತಡೆಗಟ್ಟಲು ಮತ್ತು ಭಯಮುಕ್ತ ವಾತಾವರಣ ಸೃಷ್ಟಿಗೆ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಯಾವುದೇ ರೀತಿಯ ಆತಂಕಕ್ಕೆ ಒಳಗಾಗದೇ ಆಮಿಷಕ್ಕೆ ಬಲಿಯಾಗದೇ ಮತದಾನ ಮಾಡಬೇಕು ಎಂದು ಡಾ.ಸಂಜೀವ ಪಾಟೀಲ ಅವರು ಮನವಿ ಮಾಡಿಕೊಂಡರು.

ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್ ಅವರು, ಮತದಾನ ಪ್ರಮಾಣ ಹೆಚ್ಚಳಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಮತದಾನ ಕುರಿತು ಜಾಗೃತಿ ಮೂಡಿಸಲಾಗಿದೆ ಎಂದು ತಿಳಿಸಿದರು.

ಇದಾದ ಬಳಿಕ ಮತ ಎಣಿಕೆ ಕೊಠಡಿ ಹಾಗೂ ಸ್ಟ್ರಾಂಗ್ ರೂಮ್ ಗಳಿಗೆ ಭೇಟಿ ನೀಡಿದ ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಅವರು, ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ವಿವರಿಸಿದರು.


Spread the love

About Laxminews 24x7

Check Also

81 ಸಕ್ಕರೆ ಕಾರ್ಖಾನೆಗಳ ಇಳುವರಿ ಪ್ರಮಾಣ, ಸಾಗಾಟ ಮತ್ತು ಕಟಾವು ವೆಚ್ಚದ ಮಾರ್ಗಸೂಚಿಯ ಸಮಗ್ರ ವರದಿ ಇಲ್ಲಿದೆ.

Spread the loveಬೆಂಗಳೂರು: ಕಬ್ಬು ಬೆಳೆಗಾರರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ ಪ್ರತಿ ಟನ್ ಕಬ್ಬಿಗೆ 100 ರೂ. ಹೆಚ್ಚುವರಿ ದರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ