Breaking News

ಬುಧವಾರ ಕೆಲಸ ಮಾಡುವ ಕಾರ್ಮಿಕರಿಗೆ ವೇತನ ಸಹಿತ ರಜೆ

Spread the love

ಬೆಳಗಾವಿ:  ಬುಧವಾರ ಕರ್ನಾಟಕ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ವೇತನ ಸಹಿತ ರಜೆ ಘೋಷಿಸಲಾಗಿದೆ.

1951 ರ ಪ್ರಜಾ ಪ್ರತಿನಿಧಿ ಕಾಯ್ದೆ, ಸೆಕ್ಷೆನ್ 135 (ಬಿ) ರಡಿ ಹಾಗೂ ಕೈಗಾರಿಕಾ ಸಂಸ್ಥೆಗಳ (ರಾಷ್ಟ್ರೀಯ ಮತ್ತು ಹಬ್ಬದ ರಜೆಗಳು) ಕಾಯ್ದೆ-1963 ಕಲಂ 3 (ಎ) ರನ್ವಯ ಅರ್ಹ ಮತದಾರರಿಗೆ ವೇತನ ಸಹಿತ ರಜೆ ಘೋಷಿಸಿ ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಮಾಲೀಕರು/ನಿಯೋಜಕರು ಅನುವು ಮಾಡಿ ಕೊಡಬೇಕಾಗಿ ತಿಳಿಸಿದ್ದಾರೆ.

ತಪ್ಪಿದ್ದಲ್ಲಿ ಸಂಬಂಧಪಟ್ಟ ಸಂಸ್ಥೆ/ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕಾರ್ಮಿಕ ಅಧಿಕಾರಿ ಅವರು ತಿಳಿಸಿದ್ದಾರೆ.


Spread the love

About Laxminews 24x7

Check Also

ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ’ ಎಂದು ಮರುನಾಮಕರಣ

Spread the loveಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ದಾಖಲೆಯ 17ನೇ ರಾಜ್ಯ ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ