Breaking News

ರಾಮದುರ್ಗದಲ್ಲಿ ಸಿಡಿಲು ಬಡಿದು ವ್ಯಕ್ತಿ ಸಾವು

Spread the love

ಬೆಳಗಾವಿ: ಬೆಳಗಾವಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುತ್ತಿದ್ದು, ವಿವಿಧ ಜಿಲ್ಲೆಗಳಲ್ಲಿ ಅವಾಂತರಗಳು ಸೃಷ್ಟಿಯಾಗಿವೆ.

ಬೆಳಗಾವಿಯ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ರಾಮದುರ್ಗದಲ್ಲಿ ಸಿಡಿಲು ಬಡಿದ ಪರಿಣಾಮ ಓರ್ವ ರೈತ ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಮದುರ್ಗದ ಓಬಳಾಪುರ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ.

ಪಾರ್ಲೆಷ್ ರಾಠೋಡ್ ಮೃತ ವ್ಯಕ್ತಿ. ಸ್ಥಳಕ್ಕೆ ರಾಮದುರ್ಗ ಠಾಣಾ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ