Breaking News

ಬೆಳಗಾವಿಯ 18 ವಿಧಾನಸಭಾ ಮತಕ್ಷೇತ್ರದ ಮತ ಎಣಿಕೆಗೆ ಬೆಳಗಾವಿಯ ಆರ್ ಪಿಡಿ ಕಾಲೇಜಿನಲ್ಲಿ ಸಕಲ ಸಿದ್ಧತೆ

Spread the love

ಬೆಳಗಾವಿ: ಬೆಳಗಾವಿಯ ೧೮ ವಿಧಾನಸಭಾ ಮತಕ್ಷೇತ್ರದ ಮತ ಎಣಿಕೆಗೆ ಬೆಳಗಾವಿಯ ಆರ್ ಪಿಡಿ ಕಾಲೇಜಿನಲ್ಲಿ ಸಕಲ ಸಿದ್ಧತೆ ಮಾಡಲಾಗಿದ್ದು, ಮಧ್ಯಾಹ್ನದ ವೇಳೆಗೆ ಎಲ್ಲ ಫಲಿತಾಂಶ ಬರುವ ಸಾಧ್ಯತೆ ಇದೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿದರು.

ಶುಕ್ರವಾರ ನಗರದ ಆರ್ ಪಿಡಿ ಕಾಲೇಜನಲ್ಲಿ ಸ್ಥಾಪನೆ ಮಾಡಲಾದ ಸ್ಟ್ರಾಂಗ್ ರೂಂ ಬಳಿ ಸುದ್ದಿಗಾರರೊಂದಿಗೆ ಮಾತ‌ನಾಡಿದ ಅವರು, ರಾಜ್ಯದಲ್ಲಿ ಅತಿ ದೊಡ್ಡ ಮತ ಏಣಿಕೆ ಕೇಂದ್ರ ಆರ್ ಪಿಡಿ ಕಾಲೇಜಿನಲ್ಲಿ ಮಾಡಲಾಗಿದೆ. ಮೊದಲಿಗೆ ೮ ಗಂಟೆಗೆ ಪೋಸ್ಟಲ್ ಬ್ಯಾಲೆಟ್ ಪೇಪರ್ ಕೌಂಟಿಗ್ ಮಾಡಲಾಗುವುದು. ೮.೩೦ರಿಂದ ಇವಿಎಂ ಮತ ಎಣಿಕೆ ಪ್ರಾರಂಭವಾಗುತ್ತದೆ. ಒಂದು ಟೇಬಲ್ ನಲ್ಲಿ ೫೦೦ ಮತಗಳನ್ನು ಎಣಿಕೆ ಮಾಡಲು ಸಾಧ್ಯವಾಗುತ್ತದೆ. ಮಧ್ಯಾಹ್ನದವರೆಗೆ ಎಲ್ಲ ಫಲಿತಾಂಶ ಹೊರ ಬರುವ ಸಾಧ್ಯತೆ ಇದೆ ಎಂದರು.

ಮೂರು ಹಂತದಲ್ಲಿ ಭದ್ರತೆ ವ್ಯವಸ್ಥೆ ಮಾಡಲಾಗಿದೆ. ಗುರುತಿನ ಚೀಟಿ ಇಲ್ಲದೆ ಯಾರಿಗೂ ಒಳಗಡೆ ಬಿಡುವುದಿಲ್ಲ. ಸುಮಾರು ೫ ಸಾವಿರ ಜನ ಇರುವುದರಿಂದ ಏಜೆಂಟರಿಗೂ ಗುರುತಿನ ಚೀಟಿ ನೀಡಲಾಗಿದೆ. ೨೦೦ ಮೀಟರ್ ಹೊರಗಡೆ ಅಭ್ಯರ್ಥಿಗಳ ಬೆಂಬಲಿಗರು ವಿಜಯೋತ್ಸವ ಮಾಡಬಹುದು ಎಂದರು.

ನಗರ ಪೊಲೀಸ್ ಆಯುಕ್ತ ಡಾ. ಎಂ.ಬಿ.ಬೋರಲಿಂಗಯ್ಯ ಮಾತನಾಡಿ, ಮೇ.೧೩ ರಂದು ಚುನಾವಣೆಯ ಮತ ಎಣಿಕೆ ಸಂದರ್ಭದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಸ್ಟ್ರಾಂಗ್ ರೂಂ ಹೊರಗಡೆ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ೧೮ ವಿಧಾನಸಭಾ ಕ್ಷೇತ್ರದ ಜನರು ಬರುತ್ತಾರೆ. ಕೌಂಟಿಗ್ ಏಜೆಂಟ್, ಅಧಿಕಾರಿಗಳು ಸೇರಿದಂತೆ ಸುಮಾರು ೫ ಸಾವಿರ ಜನ ಆಗಮಿಸುವ ಸಾಧ್ಯತೆ ಇದೆ. ಆದ್ದರಿಂದ ನಗರ ಪೊಲೀಸ್ ಇಲಾಖೆಯಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

ನಾಳೆ ಬೆಳಗ್ಗೆ ೫ ಗಂಟೆಯಿಂದ ಪೊಲೀಸ್ ಸಿಬ್ಬಂದಿಗಳು ಮತ ಎಣಿಕೆ ಕೇಂದ್ರದ ಸುತ್ತ ಕೆಎಸ್ ಆರ್ ಪಿ ತುಕಡಿ ಸೇರಿದಂತೆ ಸುಮಾರು ೧,೫೦೦ ಜನ ಸಿಬ್ಬಂದಿಗಳನ್ನು ನೇಮಕ ಮಾಡಲಾಗುತ್ತಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಲ್ಲಲ್ಲಿ ಪೊಲೀಸ್ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ ಪಾಟೀಲ ಇದ್ದರು.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ