Breaking News

ಫಲಿತಾಂಶಕ್ಕೆ ಕೌಂಟ್ ಡೌನ್ ಆರಂಭ B.S.Y.ನಿವಾಸಕ್ಕೆ ದಿಢೀರ್ ಭೇಟಿ ನೀಡಿ ಮಹತ್ವದ ಚರ್ಚೆ ನಡೆಸಿದ್ದಾರೆ ಬೊಮ್ಮಾಯಿ

Spread the love

ಬೆಂಗಳೂರು: ವಿಧಾನಸಭಾ ಚುನಾವಣಾ ಫಲಿತಾಂಶಕ್ಕೆ ಕೌಂಟ್ ಡೌನ್ ಆರಂಭವಾಗಿದ್ದು ರಾಜಕೀಯ ಪಕ್ಷಗಳ ನಾಯಕರು ಸರಣಿ ಸಭೆಗಳನ್ನು ನಡೆಸಿದ್ದು, ಸರ್ಕಾರ ರಚನೆ ವಿಚಾರವಾಗಿ ರಣತಂತ್ರ ರೂಪುಸುತ್ತಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಕಾಂಗ್ರೆಸ್ ನಾಯಕರು ಹೈ ವೋಲ್ಟೇಜ್ ಮೀಟಿಂಗ್ ನಡೆಸಿರುವ ಬೆನ್ನಲ್ಲೇ ಇತ್ತ ಬಿಜೆಪಿ ಪಾಳಯದಲ್ಲಿಯೂ ಚಟುವಟಿಕೆ ಚುರುಕುಗೊಂಡಿದ್ದು, ತೆರೆ ಮರೆಯಲ್ಲಿ ತಂತ್ರ ಹೆಣೆಯುತ್ತಿದ್ದಾರೆ. ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ದಿಢೀರ್ ಭೇಟಿ ನೀಡಿ ಮಹತ್ವದ ಚರ್ಚೆ ನಡೆಸಿದ್ದಾರೆ.

ಬೆಂಗಳೂರಿನ ಕುಮಾರಕೃಪ ರಸೆಯಲ್ಲಿರುವ ಯಡಿಯೂರಪ್ಪನವರ ಕಾವೇರಿ ನಿವಾಸದಲ್ಲಿ, ಸಿಎಂ ಬೊಮ್ಮಾಯಿ, ಸಚಿವ ಬೈರತಿ ಸವರಾಜ್ ಸೇರಿದಂತೆ ಬಿಜೆಪಿ ನಾಯಕರು ಸಭೆ ನಡೆಸಿದ್ದು, ಅತಂತ್ರ ಸ್ಥಿತಿ ಬಂದಲ್ಲಿ ಬಿಜೆಪಿ ಕೈಗೊಳ್ಳಬೇಕಿರುವ ಮುಂದಿನ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ.


Spread the love

About Laxminews 24x7

Check Also

ಡಿಜಿಟಲ್ ಅರೆಸ್ಟ್ ಮೂಲಕ ಮಂಗಳೂರಿನ ಮಹಿಳೆಗೆ 3.15 ಕೋಟಿ ರೂಪಾಯಿ ವಂಚನೆ

Spread the loveಮಂಗಳೂರು: ಮಂಗಳೂರಿನ ಮಹಿಳೆಯೊಬ್ಬರು ಡಿಜಿಟಲ್ ಅರೆಸ್ಟ್ ಎಂಬ ಹೆಸರಿನಲ್ಲಿ ನಡೆದ ಆನ್‌ಲೈನ್ ವಂಚನೆಯಲ್ಲಿ 3 ಕೋಟಿ 15 ಲಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ