Breaking News

ಎರಡು ದಶಕಗಳ ಚುನಾವಣಾ ಇತಿಹಾಸದಲ್ಲೇ ಜೆಡಿಎಸ್​ ಅತ್ಯಂತ ಕಳಪೆ ಸಾಧನೆ!

Spread the love

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ‘ಕಿಂಗ್​ ಮೇಕರ್’ ನಿರೀಕ್ಷೆಯಲ್ಲಿದ್ದ ಜೆಡಿಎಸ್ ಬಯಕೆಗೆ ರಾಜ್ಯದ ಮತದಾರ ಪ್ರಭುಗಳು ತಣ್ಣೀರೆರೆಚಿದ್ದಾರೆ.

ಈ ಬಾರಿ ಕೂಡ ಅತಂತ್ರ ಫಲಿತಾಂಶ ಬರುತ್ತದೆ ಎಂದು ಕೆಲವು ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿದ್ದವು. ಅಂತೆಯೇ, ಕಾಂಗ್ರೆಸ್​ ಅಥವಾ ಬಿಜೆಪಿ ಯಾವುದೇ ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಜೆಡಿಎಸ್​ ಬೆಂಬಲ ಅನಿವಾರ್ಯವಾಗುತ್ತದೆ ಎಂದೇ ಹೇಳಲಾಗುತ್ತಿತ್ತು. ಆದರೆ, ಕಾಂಗ್ರೆಸ್​ಗೆ ಸ್ಪಷ್ಟ ಬಹುಮತವನ್ನು ಜನತೆ ನೀಡಿದ್ದಾರೆ. ಇದೇ ವೇಳೆ ಜೆಡಿಎಸ್​ಗೆ ಕಳೆದ ಬಾರಿಗಿಂತ ಕಡಿಮೆ ಸ್ಥಾನಗಳನ್ನು ನೀಡುವ ಮೂಲಕ ಆಘಾತ​ ನೀಡಿದ್ದಾರೆ.

224 ವಿಧಾನಸಭಾ ಕ್ಷೇತ್ರಗಳ ಪೈಕಿ ಒಟ್ಟು 217 ಕ್ಷೇತ್ರಗಳಲ್ಲಿ ಜೆಡಿಎಸ್​ ತನ್ನ ಅಧಿಕೃತ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಆರು ಕ್ಷೇತ್ರಗಳಲ್ಲಿ ಸಿಪಿಐ ಮತ್ತು ಆರ್​ಪಿಐ ಅಭ್ಯರ್ಥಿಗಳಿಗೆ ಬಾಹ್ಯ ಬೆಂಬಲ ಘೋಷಿಸಿತ್ತು. ಇತ್ತೀಚೆಗೆ ನಿಧನರಾದ ಕಾಂಗ್ರೆಸ್​ ಕಾರ್ಯಾಧ್ಯಕ್ಷ ಧ್ರುವನಾರಾಯಣ ಪುತ್ರ ದರ್ಶನ ಧ್ರುವನಾರಾಯಣ ಅವರಿಗೆ ಪಕ್ಷ ಬೆಂಬಲ ಪ್ರಕಟಿಸಿತ್ತು. ಆದರೆ, ತಾನು ಸ್ಪರ್ಧಿಸಿದ್ದ 217 ಕ್ಷೇತ್ರಗಳಲ್ಲಿ 19 ಕಡೆ ಮಾತ್ರ ಗೆಲುವು ಸಾಧಿಸುವಲ್ಲಿ ತೆನೆ ಪಕ್ಷ ಶಕ್ತವಾಗಿದೆ. ಕಳೆದ ಬಾರಿ 37 ಕ್ಷೇತ್ರಗಳಲ್ಲಿ ಜೆಡಿಎಸ್​ ಗೆದ್ದು ತನ್ನ ಬಲ ಪ್ರದರ್ಶಿಸಿತ್ತು. ಆದರೆ, 18 ಕ್ಷೇತ್ರಗಳನ್ನು ಕಳೆದುಕೊಂಡು ದಳ ಹೀನಾಯ ಸ್ಥಿತಿಗೆ ಸಿಲುಕಿದೆ.

 ಸೋಲು-ಗೆಲುವಿನ ಮಾಹಿತಿಇತ್ತೀಚಿನ ವರ್ಷಗಳಲ್ಲಿ ಜೆಡಿಎಸ್​ ಅನುಭವಿಸಿದ ದೊಡ್ಡ ಹಿನ್ನಡೆಯೂ ಇದೇ ಆಗಿದೆ. 2004ರ ಚುನಾವಣೆಯಲ್ಲಿ ಜೆಡಿಎಸ್​ 58 ಕ್ಷೇತ್ರಗಳಲ್ಲಿ ಗೆಲುವು ಕಂಡಿತ್ತು. 2008ರಲ್ಲಿ 28, 2013ರಲ್ಲಿ 40 ಹಾಗೂ 2018ರಲ್ಲಿ 37 ಸ್ಥಾನಗಳನ್ನು ಪಡೆದಿತ್ತು. ಈ ಬಾರಿ ಚುನಾವಣೆ ಸಂದರ್ಭದಲ್ಲಿ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದು ವ್ಯಾಪಕ ಪ್ರಚಾರವನ್ನು ಮಾಡಿದ್ದರು. ರೈತರು ಮತ್ತು ನೀರಾವರಿಯನ್ನು ಗುರಿಯಾಗಿ ಇರಿಸಿಕೊಂಡು ಪಂಚರತ್ನ ಯಾತ್ರೆಯನ್ನೂ ಕೈಗೊಂಡಿದ್ದರು. ಆದರೆ, ಮತದಾರರು ಕೈ ಹಿಡಿದಿಲ್ಲ


Spread the love

About Laxminews 24x7

Check Also

ಉಗಾರದಲ್ಲಿ ಗರ್ಭಿಣಿ ಮಹಿಳೆ ಚೈತಾಲಿ ಪ್ರದೀಪ ಕಿರಣಗಿ ಹತ್ಯೆ ಹಿನ್ನೆಲೆ – ಗ್ರಾಮಸ್ಥರ ಉಗ್ರ ಪ್ರತಿಭಟನೆ

Spread the love ಉಗಾರದಲ್ಲಿ ಗರ್ಭಿಣಿ ಮಹಿಳೆ ಚೈತಾಲಿ ಪ್ರದೀಪ ಕಿರಣಗಿ ಹತ್ಯೆ ಹಿನ್ನೆಲೆ – ಗ್ರಾಮಸ್ಥರ ಉಗ್ರ ಪ್ರತಿಭಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ