Breaking News

2 ಕ್ಷೇತ್ರಗಳಲ್ಲಿಯೂ ಸೋಲನುಭವಿಸಿ ನಿರುದ್ಯೋಗಿಯಾಗಿದ್ದೇನೆ: ಸೋಮಣ್ಣ

Spread the love

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ವರುಣಾ ಹಾಗೂ ಚಾಮರಾಜನಗರ ಎರಡೂ ಕ್ಷೇತ್ರಗಳಲ್ಲಿಯೂ ಸೋಲನುಭವಿಸಿರುವ ವಿ.ಸೋಮಣ್ಣ ನನ್ನ ಪಾಡಿಗೆ ಕೆಲಸ ಮಾಡುತ್ತಾ ಇದ್ದೆ, ಈಗ ನಿರುದ್ಯೋಗಿಯಾಗಿದ್ದೇನೆ ಎಂದು ಅಳಲು ತೋಡಿಕೊಂಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಣ್ಣ, ಸೋತಾಗಿದೆ, ಏನು ಮಾತನಾಡಲಿ? ಸೋತಿದ್ದೇನೆ ಅಷ್ಟೇ. ಹೈಕಮಾಂಡ್ ಸೂಚನೆ ಮೇರೆಗೆ ಹೋಗಿ ಸ್ಪರ್ಧಿಸಿದ್ದೆ. ಎರಡು ಕ್ಷೇತ್ರಗಳನ್ನು ಚಾಲೇಂಜ್ ಆಗಿ ತೆಗೆದುಕೊಂಡಿದ್ದೆ. ಪ್ರತಿಯೊಂದಕ್ಕೂ ಕಾಲ ಅಂತ ಇರುತ್ತೇ ಎಂದಿದ್ದಾರೆ.

ನನ್ನ ಕ್ಷೇತ್ರ ಚಿನ್ನದಂತೆ ಇತ್ತು. ಹೈಕಮಾಂಡ್ ಹೇಳಿತೆಂದು ಹೋದೆ. ಈಗ ಜನ ತೀರ್ಮಾನ ಮಾಡಿದ್ದಾರೆ. ಕ್ಷೇತ್ರಕ್ಕಿಂತ ಪಕ್ಷ ದೊಡ್ಡದು ಹಾಗಾಗಿ ಪಕ್ಷದ ಮಾತು ಕೇಳಿದ್ದೇನೆ ಅಷ್ಟೇ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ