Breaking News

ಆಟವಾಡುತ್ತಾ ರಸ್ತೆಗೆ ಬಂದ ಬಾಲಕನಿಗೆ ಕಾರು ಡಿಕ್ಕಿಯಾಗಿ ದುರ್ಮರಣ

Spread the love

ಶಿವಮೊಗ್ಗ: ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕ ಒಮ್ಮೆಲೆ ರಸ್ತೆಗೆ ಬಂದಿದ್ದು, ಈ ವೇಳೆ ಕಾರು ಡಿಕ್ಕಿಯಾಗಿ  ಮೃತಪಟ್ಟ ಘಟನೆ ತೀರ್ಥಹಳ್ಳಿ ತಾಲೂಕಿನ ಗುಂಡುಗದ್ದೆಯಲ್ಲಿ ನಡೆದಿದೆ.

ಗುಂಡುಗದ್ದೆ ಗ್ರಾಮದ ನಿವಾಸಿ ಪ್ರಗತ್.ಕೆ.ಆರ್ ಮತ್ತು ರಂಜನಾ ದಂಪತಿ ಪುತ್ರ ಋಷ್ಯ.ಪಿ (7) ಮೃತಪಟ್ಟ ಬಾಲಕ. ಮನೆಯ ಬಳಿ ಮಧ್ಯಾಹ್ನದ ವೇಳೆಗೆ ಆಟವಾಡುತ್ತಿದ್ದ ಬಾಲಕ, ಒಮ್ಮೆಲೆ ರಸ್ತೆಗೆ ಬಂದಿದ್ದಾನೆ. ಈ ವೇಳೆ ಕಾರು ಡಿಕ್ಕಿಯಾಗಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ತಕ್ಷಣವೇ ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ಕರೆತರಲಾಗಿತ್ತು. ತಲೆಗೆ ಗಂಭೀರ ಗಾಯವಾಗಿದ್ದರಿಂದ ಬಾಲಕ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಮನೆಯ ಬಳಿ ರಸ್ತೆಯಲ್ಲಿ ಲಾರಿ ನಿಂತಿದ್ದರಿಂದ ಬಾಲಕ ರಸ್ತೆಗೆ ಬಂದಿದ್ದು, ಕಾಣಿಸದೇ ಕಾರು ಡಿಕ್ಕಿಯಾಗಿದೆ ಎನ್ನಲಾಗಿದೆ. ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ