Breaking News

ಆನೇಕಲ್ ರಸ್ತೆ ಬದಿಯ ಪೊದೆಯಲ್ಲಿ ಶವ ಪತ್ತೆ – ಕ್ಷುಲ್ಲಕ ಕಾರಣಕ್ಕೆ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ

Spread the love

ಬೆಂಗಳೂರು: ಆನೇಕಲ್ ರಸ್ತೆ ಬದಿಯ ಪೊದೆಯಲ್ಲಿ ಪತ್ತೆಯಾಗಿದ್ದ  ಶವ ಪ್ರಕರಣಕ್ಕೆ ಸಂಬಧಿಸಿದಂತೆ ಪೊಲೀಸರು ಕೊಲೆಯಾದ ಯುವಕನ ಗುರುತು ಪತ್ತೆಹಚ್ಚಿದ್ದಾರೆ.

ಆನೇಕಲ್ ತಾಲೂಕಿನ ರಾಮಕೃಷ್ಣಪುರ ರಸ್ತೆ ಬದಿ ಯುವಕನ ಶವ ಪತ್ತೆಯಾಗಿತ್ತು. ಈ ಶವ ಸುಭಾಷ್‌ ಎಂಬ ಯುವಕನದ್ದು ಎನ್ನಲಾಗಿದೆ.

ಸುಭಾಷ್‌ ಆನೇಕಲ್ ತಾಲೂಕಿನ ಕರ್ಪೂರು ಗ್ರಾಮದ ನಿವಾಸಿಯಾಗಿದ್ದ. ಡಕಾಯಿತಿ, ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಈತ, ಗ್ಯಾಂಗ್ ಕಟ್ಟಿಕೊಂಡು ಆಟೋದಲ್ಲಿ ಓಡಾಡುತ್ತಿದ್ದ.

ಸುಭಾಷ್‌ ಹಾಗೂ ಅವನ ಗ್ಯಾಂಗ್‌ 23ರಂದು ರಾತ್ರಿ ಆಟೋದಲ್ಲಿ ಬಂದು, ರಾಮಕೃಷ್ಣಪುರ ರಸ್ತೆಯಲ್ಲಿ ಎಣ್ಣೆ ಪಾರ್ಟಿ ಮಾಡಿದ್ದಾರೆ. ಬಳಿಕ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದೆ. ನಂತರ ದೊಣ್ಣೆ ಮತ್ತು ಮಾರಕಾಸ್ತ್ರಗಳಿಂದ ಹೊಡೆದು ಆತನನ್ನು ಕೊಲೆ ಮಾಡಲಾಗಿದೆ.

ಆರೋಪಿಗಳು ಕೊಲೆ ಮಾಡಿ ಆಟೋದಲ್ಲಿ ಎಸ್ಕೇಪ್ ಆಗಿದ್ದಾರೆ. ಆರೋಪಿಗಳ ಬಂಧನಕ್ಕೆ ಸೂರ್ಯನಗರ ಪೊಲೀಸರು ಬಲೆ ಬೀಸಿದ್ದಾರೆ.


Spread the love

About Laxminews 24x7

Check Also

ಕಾನ್‌ಸ್ಟೆಬಲ್ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದ ಆರೋಪಿ ಎನ್‌ಕೌಂಟರ್‌ನಲ್ಲಿ ಸಾವು

Spread the loveಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್ಭುಮ್ ಜಿಲ್ಲೆಯಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದ ಆರೋಪಿ, ಭಾನುವಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ