Breaking News

ಗ್ರಾಮ ಪಂಚಾಯತ್ ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ರೈತ

Spread the love

ವಿಜಯನಗರ: ಮನೆ ಕಟ್ಟಲು ಪರವಾನಗಿ ನೀಡದ ಹಿನ್ನೆಲೆಯಲ್ಲಿ ರೈತೊಬ್ಬ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕಡಬಗೆರೆ ಗ್ರಾಮ ಪಂಚಾಯತ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಕಡಬಗೆರೆ ಪಂಚಾಯತ್ ವ್ಯಾಪ್ತಿಯ ಪವನಪುರ ಗ್ರಾಮದ ನಿವಾಸಿ ಕೆ. ಬಸವರಾಜ್ ಎಂಬವರು ಗ್ರಾ.ಪಂ. ಕಚೇರಿಯಲ್ಲೇ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮನೆ ನಿರ್ಮಾಣಕ್ಕಾಗಿ ಇ-ಸೊತ್ತು ಹಾಗೂ ಪರವಾನಗಿ ನೀಡುವಂತೆ ಹಲವಾರು ಬಾರಿ ಅರ್ಜಿ ಸಲ್ಲಿಸಿದ್ದರೂ ಅನುಮತಿ ನೀಡಲಾಗಿಲ್ಲವೆಂದು ರೈತ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರವಾನಗಿ ಇಲ್ಲದೇ ಬ್ಯಾಂಕ್ ಸಾಲ ಸಿಗುತ್ತಿಲ್ಲಲ. ಕಳೆದ ಆರು ತಿಂಗಳಿಂದ ಕಚೇರಿಗೆ ಸುತ್ತಾಡುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ. ಈ ವೇಳೆ ಪಿಡಿಒ ಆಗಿರುವ ಕೃಷ್ಣಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕಚೇರಿಯಲ್ಲೇ ಅರ್ಧ ಲೀಟರ್ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಘಟನೆಯನ್ನು ಗಮನಿಸಿದ ಪಿಡಿಒ ಕೃಷ್ಣಪ್ಪ ಹಾಗೂ ಸ್ಥಳೀಯರು ತಕ್ಷಣ ಮಧ್ಯಪ್ರವೇಶಿಸಿ ರೈತನನ್ನು ರಕ್ಷಿಸಿದ್ದಾರೆ.


Spread the love

About Laxminews 24x7

Check Also

ಅಕ್ರಮ ಸಂಬಂಧ : ಮಹಿಳೆಯನ್ನು ಕೊಂದು ಅರ್ಧ ದೇಹವನ್ನ ಫ್ರಿಡ್ಜ್‌ನಲ್ಲಿಟ್ಟಿದ್ದ ನೌಕಾಪಡೆ ಉದ್ಯೋಗಿ…

Spread the loveಹೈದರಾಬಾದ್‌: ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ನೌಕಾಪಡೆಯ ಉದ್ಯೋಗಿ, ಆಕೆಯನ್ನು ಕೊಂದು, ಮೃತದೇಹವನ್ನು ಫ್ರಿಡ್ಜ್‌ನಲ್ಲಿಟ್ಟಿದ್ದ ಆಘಾತಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ