Breaking News

ಲಕ್ಕುಂಡಿ ಗ್ರಾಮ ಪಂಚಾಯತ ಮಾಜಿ ಸದಸ್ಯನ ಭೀಕರ ಕೊಲೆ

Spread the love

ಗದಗ: ಗದಗ  ಜಿಲ್ಲೆ ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಮಾಜಿ ಗ್ರಾಮ ಪಂಚಾಯಿತಿ ಸದಸ್ಯನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ.

ಬಸವಣ್ಣೆಪ್ಪ ಮಾಡಲಗೇರಿ (62) ಕೊಲೆಯಾದ ದುರ್ದೈವಿ. ಜಮೀನಿನಿಂದ ಮನೆಗೆ ವಾಪಸ್‌ ಬರುತ್ತಿದ್ದ ವೇಳೆ ದುಷ್ಕರ್ಮಿಗಳು ಬೈಕ್‌ ಅಡ್ಡಗಟ್ಟಿ ಹತ್ಯೆ ಮಾಡಿದ್ದಾರೆ.

ರಾತ್ರಿ ವೇಳೆ ಜಮೀನಿನಿಂದ ಮನೆಗೆ ಬರುತ್ತಿದ್ದ ಬಸವಣ್ಣೆಪ್ಪ ಅವರನ್ನು ಲಕ್ಕುಂಡಿ-ಸಂಭಾಪೂರ ಮಾರ್ಗದಲ್ಲಿ ಅಡ್ಡಗಟ್ಟಲಾಗಿದೆ. ಬಳಿಕ ಅವರ ಕತ್ತು ಸೀಳಿ, ತಲೆಗೆ ಬಲವಾಗಿ ಹೊಡೆದು ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಹತ್ಯೆ ಮಾಡಿದ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಕೊಲೆಗೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


Spread the love

About Laxminews 24x7

Check Also

ಭಾಲ್ಕಿಯ ಸಹಕಾರಿ ಬ್ಯಾಂಕ್ ಮೇಲೆ ಇಡಿ ದಾಳಿ ಅಂತ್ಯ

Spread the loveಬೀದರ್: ರಾಜ್ಯದಲ್ಲಿ ಭಾರೀ ಸದ್ದು ಮಾಡಿರುವ ಕರ್ನಾಟಕ ಲೋಕಸೇವಾ ಆಯೋಗದ  ಪಶುವೈದ್ಯರ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ