Breaking News

ಕಾರವಾರ ಕದಂಬ ನೌಕಾನೆಲೆಯ ಸಿಬ್ಬಂದಿ ನಾಪತ್ತೆ – ಪ್ರಕರಣದ ಸುತ್ತ ಹಲವು ಅನುಮಾನ

Spread the love

ಕಾರವಾರ: ಕದಂಬ ನೌಕಾನೆಲೆಯಲ್ಲಿ  ಸೇಲರ್  ಆಗಿ ಕರ್ತವ್ಯ ನಿರ್ವಹಿಸುತಿದ್ದ ವ್ಯಕ್ತಿಯೊಬ್ಬರು ಇದ್ದಕ್ಕಿದ್ದಂತೆ ಕಾಣೆಯಾಗಿದ್ದಾರೆ. ಇದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.

ಆಂದ್ರಪ್ರದೇಶದ ಅನಂತಪುರದ ಕುಂಟಿಮಡ್ಡಿ ಗ್ರಾಮದ ದಿನೇಶ್ ಕುಮಾರ್ (28) ಕಾಣೆಯಾದ‌ ಸಿಬ್ಬಂದಿ. ಅ.27 ರಂದು ಕದಂಬ ನೌಕಾನೆಲೆಯಲ್ಲಿ ಕರ್ತವ್ಯ ನಿರ್ವಹಿಸುತಿದ್ದ ವೇಳೆ ಮಧ್ಯಾಹ್ನ 2 ಗಂಟೆ ವೇಳೆಗೆ ಅವರು ನಾಪತ್ತೆಯಾಗಿದ್ದರು. ಈ ಕುರಿತು ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಹಿಂದಿನಿಂದಲೂ ಪಾಕಿಸ್ತಾನದ ಬೇಹುಗಾರಿಕಾ ತಂಡ ಹನಿಟ್ರ್ಯಾಪ್ ಮಾಡಿ ನೌಕಾ ಸಿಬ್ಬಂದಿ ಹಾಗೂ ಅಧಿಕಾರಿಗಳಿಂದ ಕದಂಬ ನೌಕಾನೆಲೆಯ ಮಾಹಿತಿಯನ್ನು ‌ಪಡೆಯುತ್ತಿದ್ದರು. ಈ ಸಂಬಂಧ ಕಳೆದ ಎರಡು ವರ್ಷದಲ್ಲಿ ಇದೇ ನೌಕಾನೆಲೆಯ ನಾಲ್ಕು ಸಿಬ್ಬಂದಿಯನ್ನು ನೌಕಾದಳದ ಗುಪ್ತಚರ ಇಲಾಖೆ ಬಂಧಿಸಿತ್ತು. ಇದೀಗ ನೌಕೆಯಲ್ಲಿ ಕಾರ್ಯನಿರ್ವಹಿಸುವ ಈ ಸೇಲರ್ ಕದಂಬ ನೌಕಾ ನೆಲೆಯಿಂದ ಕಾಣೆಯಾಗಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ನಾಪತ್ತೆಯಾದ ಸಿಬ್ಬಂದಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.


Spread the love

About Laxminews 24x7

Check Also

ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ – ಶಾಸಕ ಸುರೇಶ್‌ಗೌಡ ಪುತ್ರಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Spread the loveಮಂಡ್ಯ: ಕರ್ತವ್ಯನಿರತ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಾಸಕ ಸುರೇಶ್‌ಗೌಡ ಅವರ ಪುತ್ರಿ ಐಶ್ವರ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ