Breaking News

ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ – ಎರಡು ಕಿಮೀ ಸಾಲುಗಟ್ಟಿ ನಿಂತ ಜನ!

Spread the love

ಹಾಸನ: ಹಾಸನಾಂಬ ದೇವಿ ದರ್ಶನಕ್ಕೆ ಮೊದಲ ದಿನವೇ ಭಕ್ತರ ದಂಡು ಸಾಗರೋಪಾದಿಯಾಗಿ ಹರಿದುಬಂದಿದೆ. ಮುಂಜಾನೆ 3 ಗಂಟೆಯಿಂದಲೇ ದೇವಿ ದರ್ಶನಕ್ಕೆ ಸಹಸ್ರಾರು ಭಕ್ತರು ಸಾಲುಗಟ್ಟಿ ನಿಂತಿದ್ದಾರೆ. 300 ರೂ. ವಿಶೇಷ ದರ್ಶನದ ಸಾಲಿನಲ್ಲಿ ಸುಮಾರು ಎರಡು ಕಿಲೋ ಮೀಟರ್‌ವರೆಗೂ ಕ್ಯೂನಲ್ಲಿ ಭಕ್ತರು ದೇವಿ ದರ್ಶನಕ್ಕಾಗಿ ಕಾದು ನಿಂತಿದ್ದಾರೆ.

1000 ರೂ. ವಿಶೇಷ ದರ್ಶನದ ಸಾಲು ಸಂಪೂರ್ಣ ಭರ್ತಿಯಾಗಿದೆ. ಬೆಳಿಗ್ಗೆ 8 ಗಂಟೆಯಿಂದ 10 ಗಂಟೆಯವರೆಗೆ ಗೋಲ್ಡ್ ಪಾಸ್ ಪಡೆದವರಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಬೆಳಿಗ್ಗೆ 10:30 ರಿಂದ 12:30ರ ವರೆಗೆ ಪ್ರೋಟೋಕಾಲ್‌ನಲ್ಲಿ ಬರುವವರಿಗೆ (VIP) ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ.

ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿರುವುದರಿಂದ ಸ್ಥಳದಲ್ಲಿ ಎಸ್‌ಪಿ ಶುಭನ್ವಿತಾ ಅವರು ಮೊಕ್ಕಾಂ ಹೂಡಿದ್ದಾರೆ. ಧರ್ಮ ದರ್ಶನ, 1000 ರೂ. 300 ರೂ. ನ ವಿಶೇಷ ದರ್ಶನದ ಸಾಲುಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಯಾವುದೇ ನೂಕುನುಗ್ಗಲು ಉಂಟಾಗದಂತೆ ಪೊಲೀಸರು ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದಾರೆ.

ವರ್ಷಕ್ಕೊಮ್ಮೆ ಮಾತ್ರ ದರ್ಶನ ಭಾಗ್ಯ ಕರುಣಿಸುವ ಹಾಸನದ ಅಧಿದೇವತೆ ತಾಯಿ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ  ಗುರುವಾರ (ಅ.29) ಶುಭ ಚಾಲನೆ ದೊರೆತಿತ್ತು. ಆಶ್ವೀಜ ಮಾಸದ ಮೊದಲ ಗುರುವಾರ ಮಧ್ಯಾಹ್ನ 12:28ಕ್ಕೆ ಅರಸು ವಂಶಸ್ಥ ನಂಜರಾಜೆ ಅರಸ್ ಸಂಪ್ರದಾಯದಂತೆ ಗೊನೆಯುಳ್ಳ ಬಾಳೆ ಕಂಬ ಕಡಿದ ನಂತರ ಹಲವು ಗಣ್ಯರ ಸಮ್ಮುಖದಲ್ಲಿ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲನ್ನು ತೆರೆಯಲಾಗಿತ್ತು.


Spread the love

About Laxminews 24x7

Check Also

ಬ್ಯಾಲೆಟ್ ಪೇಪರ್‌ನಲ್ಲೇ ಕಾಂಗ್ರೆಸ್ ಸೋತಿದೆ, ಪತನದ ದಿನಗಳು ಹತ್ತಿರ ಬರ್ತಿದೆ: ನಿಖಿಲ್ ಕುಮಾರಸ್ವಾಮಿ

Spread the loveರಾಮನಗರ: ಕಾಂಗ್ರೆಸ್  ಇವಿಎಂ ಮೇಲೆ ಅನುಮಾನ ಪಟ್ಟು, ಬ್ಯಾಲೆಟ್ ಪೇಪರ್  ಚುನಾವಣೆ ಬೇಕು ಅಂತಿದ್ದರು. ಈಗ ಬ್ಯಾಲೆಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ