Breaking News

ಜನಗಣತಿ ಕಾರ್ಯಕ್ಕೆ ತೆರಳುತ್ತಿದ್ದ ಶಿಕ್ಷಕಿಗೆ ಟ್ರ್ಯಾಕ್ಟರ್ ಡಿಕ್ಕಿ; ಸ್ಥಳದಲ್ಲೇ ದಾರುಣ ಅಂತ್ಯ

Spread the love

ಸಿದ್ದಾಪುರ: ಸರ್ಕಾರಿ ಜವಾಬ್ದಾರಿಯಾದ ಜನಗಣತಿ ಕಾರ್ಯದ ಮಾಹಿತಿ ನೀಡಲು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಶಿಕ್ಷಕಿಯೊಬ್ಬರಿಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃ., ತಪ. ಟ್ಟ ಘಟನೆ ಶಿರಸಿ-ಸಿದ್ದಾಪುರ ಮುಖ್ಯರಸ್ತೆಯ ಕನ್ನಳ್ಳಿ (ಮಳವತ್ತಿ) ಚೆಕ್‌ಪೋಸ್ಟ್ ಬಳಿ ಸಂಭವಿಸಿದೆ.

ಅಪಘಾತದಲ್ಲಿ ಮೃ,.ತಪ .ಟ್ಟ ಶಿಕ್ಷಕಿಯನ್ನು ಬಸವಗಿರಿ, ಕೊಲಸಿರ್ಸಿ ಕ್ರಾಸ್ ನಿವಾಸಿ ಪೂರ್ಣಿಮಾ ಗಣಪತಿ ಭಟ್ (47) ಎಂದು ಗುರುತಿಸಲಾಗಿದೆ. ಇವರು ಸಿದ್ದಾಪುರ ಪಟ್ಟಣದ ಹೊಸೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ (HPS ಹೊಸೂರು) ಸಹ-ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. ವೃತ್ತಿಪರತೆಗೆ ಹೆಸರಾಗಿದ್ದ ಇವರು, ಪ್ರಸ್ತುತ ಸರ್ಕಾರದ ಮಹತ್ವದ ಕಾರ್ಯವಾದ ಜನಗಣತಿ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದರು.

ಶಿರಸಿ ಕಡೆಯಿಂದ ಸಿದ್ದಾಪುರದತ್ತ ಕಟ್ಟಿಗೆ ತುಂಬಿಕೊಂಡು ಬರುತ್ತಿದ್ದ ಟ್ರ್ಯಾಕ್ಟರ್, ಪೂರ್ಣಿಮಾ ಅವರು ಚಲಾಯಿಸುತ್ತಿದ್ದ ಸ್ಕೂಟರ್‌ಗೆ ಅಪ್ಪಳಿಸಿದೆ. ಟ್ರ್ಯಾಕ್ಟರ್ ಅನ್ನು ಅತಿ ವೇಗ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಿದ್ದೇ ಈ ಅಪಘಾತಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ಶಿಕ್ಷಕಿ ದುರದೃಷ್ಟವಶಾತ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಅಜಾಗರೂಕತೆಯಿಂದ ವಾಹನ ಚಲಾಯಿಸಿ ಅಪಘಾತಕ್ಕೆ ಕಾರಣನಾದ ಹಾವೇರಿ ಮೂಲದ ಟ್ರ್ಯಾಕ್ಟರ್ ಚಾಲಕ ಆಕಾಶ ಮಂಜಪ್ಪ ಬಾಲಣ್ಣನವರ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.

ಸದಾ ಹಸನ್ಮುಖಿಯಾಗಿ ವಿದ್ಯಾರ್ಥಿಗಳೊಂದಿಗೆ ಬೆರೆಯುತ್ತಿದ್ದ ಶಿಕ್ಷಕಿ ಪೂರ್ಣಿಮಾ ಭಟ್ ಅವರ ಅಕಾಲಿಕ ಮರಣದಿಂದ ಹೊಸೂರು ಶಾಲೆಯ ವಿದ್ಯಾರ್ಥಿಗಳು, ಸಹೋದ್ಯೋಗಿಗಳು ಹಾಗೂ ಪೋಷಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಿದ್ದಾಪುರ ಹಾಗೂ ಶಿರಸಿ ಭಾಗದ ಶಿಕ್ಷಕ ವಲಯದಲ್ಲಿ ಆಳವಾದ ಶೋಕ ಮಡುಗಟ್ಟಿದೆ. ರಸ್ತೆ ಸುರಕ್ಷತೆ ಹಾಗೂ ಭಾರಿ ವಾಹನಗಳ ಅತಿವೇಗದ ನಿಯಂತ್ರಣದ ಬಗ್ಗೆ ಸಾರ್ವಜನಿಕರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಹವಾಮಾನ ವೈಪರಿತ್ಯ – ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

Spread the loveಮಂಗಳೂರು: ಇಲ್ಲಿನ ವಿಮಾನ ನಿಲ್ದಾಣಕ್ಕೆ ಬಂದಿದ್ದ ಎರಡು ವಿಮಾನಗಳು ಹವಾಮಾನ ವೈಪರಿತ್ಯದಿಂದಾಗಿ ಅರ್ಧಗಂಟೆ ಕಾಲ ಆಕಾಶದಲ್ಲೇ ಸುತ್ತಾಡಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ