Breaking News

ಕುಂದಾಪುರ ತಾಲ್ಲೂಕಿನ ಮರವಂತೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೀಕರ ಅಪಘಾತ

Spread the love

ಕುಂದಾಪುರ ತಾಲ್ಲೂಕಿನ ಮರವಂತೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ನಡೆದ ಖಾಸಗಿ ಬಸ್ ಮತ್ತು ಲಾರಿ ನಡುವಿನ ಭೀಕರ ಅಪಘಾತದ ಸುದ್ದಿ ಕೇಳಿ ಮನಸ್ಸಿಗೆ ಆಘಾತ ಮತ್ತು ನೋವುಂಟಾಗಿದೆ.

ಈ ದುರ್ಘಟನೆಯಲ್ಲಿ ನಮ್ಮ ಶಿವಮೊಗ್ಗ ಜಿಲ್ಲೆಯ ಶಂಕರಘಟ್ಟದ ರಂಭಾಪುರಿ ಕಾಲೇಜಿನ ವಿದ್ಯಾರ್ಥಿಗಳು ಪ್ರವಾಸ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ಈ ಅವಾಂತರ ಸಂಭವಿಸಿರುವುದು ದುರದೃಷ್ಟಕರ. ಅಪಘಾತದಲ್ಲಿ ಬಸ್ ಚಾಲಕ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿಗಳು ಹಾಗೂ ಇತರ ಪ್ರಯಾಣಿಕರು ಶೀಘ್ರವಾಗಿ ಚೇತರಿಸಿಕೊಳ್ಳಲಿ. ಗಾಯಾಳುಗಳಿಗೆ ಅತ್ಯುತ್ತಮ ಚಿಕಿತ್ಸೆ ಕೊಡಿಸಲು ಸ್ಥಳೀಯ ಆಡಳಿತ ಮತ್ತು ಆಸ್ಪತ್ರೆಯ ವೈದ್ಯರೊಂದಿಗೆ ಸಂಪರ್ಕದಲ್ಲಿದ್ದೇನೆ.

ರಕ್ಷಣಾ ಕಾರ್ಯದಲ್ಲಿ ಶ್ರಮಿಸಿದ ಅಂಬ್ಯುಲೆನ್ಸ್ ತಂಡ ಹಾಗೂ ಸ್ಥಳೀಯ ಪೊಲೀಸರ ಕಾರ್ಯ ಶ್ಲಾಘನೀಯ.

ಪ್ರವಾಸಿಗರು ಮತ್ತು ವಾಹನ ಸವಾರರು ಹೆದ್ದಾರಿಗಳಲ್ಲಿ ಸಂಚರಿಸುವಾಗ ಹೆಚ್ಚಿನ ಜಾಗರೂಕತೆ ವಹಿಸಬೇಕೆಂದು ಈ ಮೂಲಕ ವಿನಂತಿಸುತ್ತೇನೆ.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ