Breaking News

ರಾಜ್ಯದಲ್ಲಿ ಘೋರ ದುರಂತ ; ಉರಿ ಬಿಸಿಲಿಗೆ 15 ವರ್ಷದ ಬಾಲಕ ಬಲಿ

Spread the love

ರಾಜ್ಯದ ಉತ್ತರ ಒಳನಾಡು ಭಾಗಗಳಲ್ಲಿ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಬೆಂಕಿಯಂಥ ಬಿಸಿಲಿಗೆ 15 ವರ್ಷದ ಬಾಲಕನೊಬ್ಬ ಬಲಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.

ಶ್ರೀಶೈಲ ಬಿರಾದಾರ (15) ಮೃತ ಬಾಲಕ. ಶಾಲಾ ಬೇಸಿಗೆ ರಜೆ ಹಿನ್ನೆಲೆಯಲ್ಲಿ ಬಾಲಕ ಶ್ರೀಶೈಲ ಮಧ್ಯಾಹ್ನದ ಉರಿ ಬಿಸಿಲಿನಲ್ಲಿ ಆಟವಾಡಿದ್ದಾನೆ. ಬಿಸಿಲಿನಲ್ಲಿ ದೀರ್ಘಕಾಲ ಆಟವಾಡಿದ್ದರಿಂದ ಬಸವಳಿದಿದ್ದ ಬಾಲಕನ ಆರೋಗ್ಯದಲ್ಲಿ ದಿಢೀರ್ ವ್ಯತ್ಯಾಸ ಕಂಡುಬಂದಿದ್ದು, ಕೂಡಲೇ ಬಾಲಕನನ್ನು ಸಮೀಪದ ಆಸ್ಪತ್ರೆಗೆದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಮಾಜಿ ಸೈನಿಕನ ಕೊಲೆ ರಹಸ್ಯ ಬಯಲು!

Spread the loveಹುಕ್ಕೇರಿ ತಾಲೂಕಿನ ಘೋಡಗೇರಿ ಗ್ರಾಮದ ಮಾಜಿ ಸೈನಿಕ ಸಂದೀಪ್ ಮಂಜರಗಿ (46) ಕೊಲೆ ಪ್ರಕರಣ ರಹಸ್ಯ ಬಯಲಾಗಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ