Breaking News

ಗಾಂಜಾ ಸೇವನೆ ಪ್ರಕರಣಕ್ಕೆ ವಿಭಿನ್ನ ಶಿಕ್ಷೆ: ಪೊಲೀಸರ ಜೊತೆ ರಸ್ತೆಗಿಳಿದ ಆರೋಪಿ ಮಾಡಿದ್ದೇನು ಗೊತ್ತಾ?

Spread the love

ಸಾಮಾನ್ಯವಾಗಿ ಅಪರಾಧಿಗಳಿಗೆ ದಂಡ ಅಥವಾ ಜೈಲು ಶಿಕ್ಷೆ ವಿಧಿಸುವುದನ್ನು ನೋಡಿದ್ದೇವೆ. ಆದರೆ, ಗಾಂಜಾ ಸೇವನೆ ಪ್ರಕರಣದಲ್ಲಿ ನ್ಯಾಯಾಲಯ ನೀಡಿದ ಶಿಕ್ಷೆ ಮಾತ್ರ ವಿಭಿನ್ನವಾಗಿದೆ. ತಪ್ಪು ಮಾಡಿದ ವ್ಯಕ್ತಿಗೆ ಪೊಲೀಸರ ಜೊತೆಗೇ ಸಾರ್ವಜನಿಕ ಸೇವೆ ಮಾಡುವಂತೆ ಆದೇಶಿಸಲಾಗಿದೆ. ಅದರಂತೆ ಆರೋಪಿ ಸಂಚಾರಿ ಪೊಲೀಸರೊಂದಿಗೆ ರಸ್ತೆಗಿಳಿದು ವಾಹನಗಳ ಸಂಚಾರ ನಿಯಂತ್ರಿಸಿದ್ದಾರೆ.

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸಿದ್ದಾಪುರ ಪಟ್ಟಣದಲ್ಲಿ ಈ ಅಪರೂಪದ ಘಟನೆ ನಡೆದಿದೆ. ಗಾಂಜಾ ಸೇವನೆ ಪ್ರಕರಣದಲ್ಲಿ ಸಿದ್ದಾಪುರ ನಿವಾಸಿ ಆಸೀಮ್ ಎಂಬಾತನಿಗೆ ನ್ಯಾಯಾಲಯ 5,000 ರೂಪಾಯಿ ದಂಡ ವಿಧಿಸಿದೆ. ಇದರ ಜೊತೆಗೆ ಸಮುದಾಯ ಸೇವೆ ಮಾಡುವಂತೆಯೂ ಆದೇಶಿಸಿದೆ.

ನ್ಯಾಯಾಲಯದ ಆದೇಶದಂತೆ ನವೆಂಬರ್ 15ರಂದು ಆಸೀಮ್ ಪೊಲೀಸರ ಮೇಲ್ವಿಚಾರಣೆಯಲ್ಲಿ ಸಂಚಾರ ನಿಯಂತ್ರಣ ಕರ್ತವ್ಯಕ್ಕೆ ಹಾಜರಾಗಿದ್ದರು. ಪಟ್ಟಣದ ವಾಹನ ಸಂಚಾರಕ್ಕೆ ಅಡ್ಡಿಯಾಗದಂತೆ ವಾಹನಗಳ ಓಡಾಟವನ್ನು ಸುಗಮಗೊಳಿಸುವುದು ಅವರ ಕೆಲಸವಾಗಿತ್ತು.

ದಿನವಿಡೀ ವಾಹನಗಳ ಸಂಚಾರ ನಿಯಂತ್ರಿಸುವುದರ ಜೊತೆಗೆ ಪಾದಚಾರಿಗಳ ಓಡಾಟಕ್ಕೂ ಸಹಕರಿಸಿದ್ದಾರೆ. ಈ ಮೂಲಕ ನ್ಯಾಯಾಲಯ ವಿಧಿಸಿದ ಸಮುದಾಯ ಸೇವೆಯ ಶಿಕ್ಷೆಯನ್ನು ಪಾಲಿಸಿದ್ದಾರೆ.

ಕೇವಲ ದಂಡ ಅಥವಾ ಜೈಲು ಶಿಕ್ಷೆಗೆ ಸೀಮಿತವಾಗದೆ, ಸಮುದಾಯ ಸೇವೆಯ ಮೂಲಕ ಅಪರಾಧಿಗೆ ಸಾಮಾಜಿಕ ಜವಾಬ್ದಾರಿಯ ಅರಿವು ಮೂಡಿಸುವ ಉದ್ದೇಶವನ್ನು ನ್ಯಾಯಾಲಯ ಹೊಂದಿದೆ.

ಇದೇ ವರ್ಷ ಮಾರ್ಚ್‌ನಲ್ಲಿ ಕಡೂರು ಉಪವಿಭಾಗದಲ್ಲಿ ಮದ್ಯಪಾನ ಮಾಡಿ ಬೈಕ್ ಚಾಲನೆ ಮಾಡಿದ್ದ ವ್ಯಕ್ತಿಯೊಬ್ಬರಿಗೆ ರಸ್ತೆ ಬದಿಯಲ್ಲಿ ನಿಂತು ಸಂಚಾರ ನಿಯಮಗಳ ಫಲಕ ಹಿಡಿದುಕೊಳ್ಳುವಂತೆ ನ್ಯಾಯಾಲಯ ಆದೇಶಿಸಿತ್ತು. ಶಿಕ್ಷೆಯ ಅವಧಿಯಲ್ಲಿ ಆತ ಫಲಕ ಹಿಡಿದಿರುವುದನ್ನು ಖಚಿತಪಡಿಸಿಕೊಳ್ಳಲು ಸಮೀಪದಲ್ಲೇ ಪೊಲೀಸ್ ಸಿಬ್ಬಂದಿಯನ್ನೂ ನಿಯೋಜಿಸಲಾಗಿತ್ತು.


Spread the love

About Laxminews 24x7

Check Also

ರೈತರ ಸಾಲ ವಸೂಲಾತಿಗೆ ಒತ್ತಡ ಹೇರಬೇಡಿ; ಮರುಪಾವತಿಗೆ ಕಾಲಾವಕಾಶ ನೀಡಿ: ಜಗದೀಶ್ ಶೆಟ್ಟರ್ ಎಚ್ಚರಿಕೆ

Spread the loveಬೆಳಗಾವಿ: ಬರಗಾಲದ ಪರಿಸ್ಥಿತಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಸಾಲ ವಸೂಲಾತಿಗೆ ಬ್ಯಾಂಕ್ ಅಧಿಕಾರಿಗಳು ಒತ್ತಡ ಹೇರದೆ, ಮಾನವೀಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ