Breaking News

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಸಾವು

Spread the love

ಬಳ್ಳಾರಿ: ನಗರದ ಬಿಮ್ಸ್ ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿದ್ದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿ ಮೃತಪಟ್ಟಿದ್ದು ಸಾವಿನ ಹಿಂದೆ ಜೈಲು ಸಿಬ್ಬಂದಿ ಹಾಗೂ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಸಂಕನಾಳು ಗ್ರಾಮದ ನಿವಾಸಿ ಹನುಮಂತು (25) ಮೃತಪಟ್ಟ ದುರ್ದೈವಿ. ಅಣ್ಣ ಸಾವಿಗೆ ನ್ಯಾಯಬೇಕೆಂದು ತಂಗಿ ಮರಿಯಮ್ಮ ಆಗ್ರಹಿಸಿದ್ದಾರೆ.

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಹನುಮಂತು ನನ್ನು ಕಳೆದ ಜನವರಿಯಲ್ಲಿ ರಾಯಚೂರು ಜೈಲಿನಿಂದ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿತ್ತು. ಏಪ್ರಿಲ್ 29ರಂದು ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆ ಜೈಲು ಅಧಿಕಾರಿಗಳು ಆತನನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, 1 ವಾರದಿಂದ ಆಸ್ಪತ್ರೆಗೆ ದಾಖಲಿಸಿದ್ದರೂ ಈ ಬಗ್ಗೆ ರಾಯಚೂರಿನಲ್ಲಿರುವ ಅವರ ಪೋಷಕರಿಗೆ ಕಿಂಚಿತ್ತೂ ಮಾಹಿತಿ ನೀಡಿರಲಿಲ್ಲ ಎನ್ನಲಾಗಿದೆ.

ಸದ್ಯ ಮೃತನ ತಂಗಿ ಮರಿಯಮ್ಮ ನಮ್ಮ ಅಣ್ಣನ ಸಾವಿಗೆ ಪೊಲೀಸರು ಮತ್ತು ವೈದ್ಯರ ಅಕ್ಷಮ್ಯ ನಿರ್ಲಕ್ಷ್ಯವೇ ಕಾರಣ ಎಂದು ದೂರಿದ್ದಾರೆ. ಆಸ್ಪತ್ರೆಗೆ ದಾಖಲಿಸಿದ ಬಗ್ಗೆ ಮಾಹಿತಿ ನೀಡಿಲ್ಲ. ಮೇ 6ರ ಮಧ್ಯರಾತ್ರಿ ಕರೆ ಮಾಡಿ ಮೃತಪಟ್ಟ ಬಗ್ಗೆ ಮಾಹಿತಿ ನೀಡಿದ್ದಾರೆಂದು ಆರೋಪಿಸಿದರು.

ಇನ್ನು ಜೈಲಲ್ಲಿ ಆರಾಮವಾಗಿಯೇ ಇದ್ದ ಹನುಮಂತು ಏಕಾಏಕಿ ಮೃತಪಟ್ಟಿದ್ದೇಗೆ ಎಂದು ಅಣ್ಣ ಹನುಮಂತು ಸಾವಿನ ಬಗ್ಗೆ ಮರಿಯಮ್ಮ ಅನುಮಾನ ವ್ಯಕ್ತಪಡಿಸಿದ್ದು, ಅಣ್ಣನ ಸಾವಿಗೆ ನ್ಯಾಯಬೇಕೆಂದು ಆಗ್ರಹಿಸಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಪೊಲೀಸರ ವಶದಲ್ಲಿದ್ದ ಕೊಲೆ ಆರೋಪಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಶೇಷಾದ್ರಿಪುರಂ ನಿವಾಸಿ ಮಂಜುನಾಥ್(36) ಮೃತ ಆರೋಪಿ. ಸದ್ಯ ಮಹಾಲಕ್ಷ್ಮೀ ಲೇಔಟ್ ಠಾಣೆಯಲ್ಲಿ ಯುಡಿಆರ್ ದಾಖಲಾಗಿದೆ.

ಏಪ್ರಿಲ್ 28ರಂದು ಪೊಲೀಸರು ಮಂಜುನಾಥ್ ಬಂಧಿಸಿದ್ದರು. ಮೇ 1ರಂದು ಹೊಟ್ಟೆನೋವು ಎಂದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆರೋಪಿಗೆ ಪಿತ್ತಜನಕಾಂಗ ಮತ್ತು ಸಕ್ಕರೆ ಕಾಯಿಲೆ ಇತ್ತು. ಚಿಕಿತ್ಸೆ ಫಲಿಸದೇ ಮೇ 3ರಂದು ಮಂಜುನಾಥ್ ಮೃತಪಟ್ಟಿದ್ದಾರೆ.


Spread the love

About Laxminews 24x7

Check Also

ತಿರಂಗ ಯಾತ್ರೆಯಲ್ಲಿ ಗಮನ ಸೆಳೆದ ಈಸೂರು ದಂಗೆಯ ಸ್ತಬ್ಧಚಿತ್ರ

Spread the loveಶಿವಮೊಗ್ಗ: ನಗರದ  ಶೀನಪ್ಪಶೆಟ್ಟಿ ವೃತ್ತದಲ್ಲಿ ಸ್ವಾತಂತ್ರ್ಯೋತ್ಸವ  ಅಂಗವಾಗಿ ಬಿಜೆಪಿ ವತಿಯಿಂದ ರಾಮಣ್ಣಶ್ರೇಷ್ಟಿ ಪಾರ್ಕ್‌ನಿಂದ ಗೋಪಿ ವೃತ್ತದವರೆಗೆ ತಿರಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ